ಕತಾರ್ನಲ್ಲಿರುವ ಅಮೇರಿಕಾ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದ ಬೆನ್ನಲ್ಲೇ ಇದೀಗ ಮಂಗಳೂರಿನಿಂದ ಹೊರಡುವ ಅಂತರಾಷ್ಟ್ರೀಯ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ.

ಪ್ರಯಾಣಿಕರಿಗೆ ವಿಮಾನ ನಿಲ್ದಾಣ ತಮ್ಮ ವಿಮಾನಗಳ ಬಗ್ಗೆ ಸಂಬಂಧಪಟ್ಟ ವಿಮಾನಯಾನ ಸಂಸ್ಥೆಯಿಂದ ಮಾಹಿತಿಯನ್ನು ಪಡೆಯಲು ತಿಳಿಸಿದೆ. ಮಂಗಳೂರಿನಿಂದ ಹೊರಟಿದ್ದ ಎರ್ ಇಂಡಿಯಾ ಎಕ್ಸ್ಪ್ರೆಸ್ ದಮ್ಮಾಮ್ಗೆ ಹೋಗುವ ಬದಲು ಮಸ್ಕತ್ ಕಡೆ ತಿರುಗಿಸಲಾಗಿತ್ತು. ಅಬುದಾಭಿಗೆ ಹೋಗುವ ಇಂಡಿಗೋ ವಿಮಾನ ಮುಂಬೈನಲ್ಲಿ ಲ್ಯಾಂಡ್ ಆಗಿತ್ತು. ಇದೀಗ ಎರಡೂ ವಿಮಾನಗಳು ಮಂಗಳೂರಿಗೆ ವಾಪಸ್ ಆಗಿವೆ.



