ರಾಷ್ಟ್ರಪತಿಗಳಿಂದ ಅನುಮೋದನೆಯಾಗದಿರುವ ಏಳು ಬಿಲ್ಲುಗಳ ಬಗ್ಗೆ ರಾಷ್ಟ್ರಪತಿಗಳನ್ನು ಭೇಟಿ ಮಾಡಿ ಚರ್ಚಿಸಲಾಗಿದೆ.

ಬಿಲ್ಲುಗಳನ್ನು ಸಂಬಂಧಪಟ್ಟ ಇಲಾಖೆಗಳಿಗೆ ಕಳುಹಿಸಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ. ಅವುಗಳನ್ನು ತರಿಸಿ ಅನುಮೋದನೆ ನೀಡಬೇಕೆಂದು ರಾಷ್ಟ್ರಪತಿಗಳಿಗೆ ಮನವಿ ಮಾಡಲಾಗಿದೆ. ಇದೇ ವೇಳೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ, ವಾರದ ಹಿಂದೆ 16 ನೇ ಹಣಕಾಸು ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರನ್ನು ಭೇಟಿ ಮಾಡಿದ್ದು, ಎರಡನೇ ಹೆಚ್ಚುವರಿ ಮನವಿಯನ್ನು ಕೊಟ್ಟು, 14 ನೇ ಹಣಕಾಸು ಆಯೋಗದಲ್ಲಿ 4.7% ಅಡ್ಡವಾಗಿ ತೆರಿಗೆ ಹಂಚಿಕೆಯಾಗಿತ್ತು. 15 ನೇ ಹಣಕಾಸು ಆಯೋಗದಲ್ಲಿ 3.6% ಆಗಿದೆ. ಶೇಕಡಾ 1.1% ಕಡಿಮೆಯಾಗಿದ್ದು, ಇದು ಒಟ್ಟಾರೆ ಅನುದಾನ ಹಂಚಿಕೆಯಲ್ಲಿ ಶೇ. 23% ಗಿಂತಲೂ ಕಡಿಮೆಯಾಗಿದೆ. 5 ವರ್ಷಗಳಲ್ಲಿ ಒಟ್ಟು 80000 ಕೋಟಿ ಕಡಿಮೆಯಾಗಿದೆ ಎಂದಿದ್ದಾರೆ.



