ಪುತ್ತೂರು: ತಾಲೂಕಿನಾದ್ಯಂತ ಇಂದು ಬೆಳಗ್ಗೆಯಿಂದ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನದ ನಂತರ ಪುತ್ತೂರು ತಾಲೂಕಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ. ಭಾರೀ ಮಳೆಯಿಂದಾಗಿ ಮಕ್ಕಳಿಗೆ ರಜೆ ನೀಡುವಂತೆ ಶಾಸಕ ಅಶೋಕ್ ಕುಮಾರ್ ರೈ ಜಿಲ್ಲಾಧಿಕಾರಿಗೆ ತಿಳಿಸಿದ್ದು, ಇಂದು ಮಧ್ಯಾಹ್ನದ ನಂತರ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಮಳೆಯ ತೀವ್ರತೆಯನ್ನು ನೋಡಿಕೊಂಡು ನಾಳೆಯ ರಜೆಯನ್ನು ನಿರ್ಧರಿಸಲಾಗುವುದು .



