ಕನ್ನಡ ನಾಡಿನ ಶ್ರೀಮಂತಿಕೆಯನ್ನು ಪ್ರತಿಬಿಂಬಿಸುವ ಬೆಂಗಳೂರಿನ ನಿರ್ಮಾತೃ ನಾಡ ಪ್ರಭು ಕೆಂಪೇಗೌಡ ಅವರು ಅತ್ಯಂತ ಎತ್ತರದಲ್ಲಿ ಗುರುತಿಸುವ, ಪೂಜಿಸಲ್ಪಡುವ ಸ್ಥಾನ ಮಾನಕ್ಕೆ ಭಾಜನರಾಗಿದ್ದಾರೆ.

ಇವರ ಜನ್ಮ ದಿನಾಚರಣೆಯನ್ನು ಸರಕಾರ ಮಾಡಿದರೂ ಮುಂದಿನ ಪೀಳಿಗೆಗೆ ಅವರ ಸಂಪೂರ್ಣ ವಿವರ ನೀಡುವ ನಿಟ್ಟಿನಲ್ಲಿ ಕೆಂಪೇಗೌಡರ ವಿಚಾರವನ್ನು ಪಠ್ಯ ಪುಸ್ತಕದಲ್ಲಿ ಅಳವಡಿಸುವ ಕಾರ್ಯವಾಗಬೇಕು ಎಂದು ನೆಲ್ಯಾಡಿ ಸಂತ ಜಾರ್ಜ್ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಚೇತನ್ ಆನೆಗುಂಡಿ ಹೇಳಿದ್ದಾರೆ. ಅವರು ಶುಕ್ರವಾರ ಕಡಬ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಕಡಬ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಆಶ್ರಯದಲ್ಲಿ ನಡೆದ ನಾಡಪ್ರಭು ಕೆಂಪೇ ಗೌಡ ಜಯಂತಿ ಆಚರಣೆಯಲ್ಲಿ ಪ್ರಧಾನ ಭಾಷಣ ಮಾಡಿದ್ರು.



