ಜನ ಮನದ ನಾಡಿ ಮಿಡಿತ

Advertisement

ಡಾ. ಪುನೀತ್ ರಾಜ್ ಕುಮಾರ್ ಅಭಿನಯದ ಹುಡುಗರು ಸಿನಿಮಾದ ಪಂಕಜಾ ಹಾಡಿನ ನಟಿ ನಿಧನ

ಬಾಲಿವುಡ್‌ನ ಖ್ಯಾತ ನಟಿ ಹಾಗೂ ಮಾಡೆಲ್ ಶೆಫಾಲಿ ಜರಿವಾಲಾ ಅವರು ತಡರಾತ್ರಿ ಹೃದಯ ಸ್ತಂಭನ ದಿಂದ ನಿಧನ ಹೊಂದಿದ್ದಾರೆ.

ಸದ್ಯ ಈ ಸುದ್ದಿ ತಿಳಿಯುತ್ತಿದ್ದಂತೆ ಬಾಲಿವುಡ್‌ನ ನಟ, ನಟಿಯರು ಬಿಗ್ ಶಾಕ್‌ಗೆ ಒಳಗಾಗಿದ್ದಾರೆ. ಕನ್ನಡದಲ್ಲಿ ಪುನೀತ್ ರಾಜ್‌ಕುಮಾರ್ ನಟನೆಯ ಹುಡುಗರು ಸಿನಿಮಾದಲ್ಲಿ ಪಂಕಜಾ ಸಾಂಗಿಗೆ ಶೆಫಾಲಿ ಜರಿವಾಲಾ ಹೆಜ್ಜೆ ಹಾಕಿದ್ದರು. ಬಾಲಿವುಡ್ ನಟಿ ಶೆಫಾಲಿ ಜರಿವಾಲಾ ಅವರಿಗೆ ತಡರಾತ್ರಿ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಮುಂಬೈ ನಗರದ ಬೆಲ್ಲೆವ್ಯೂ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಆದಾಗಲೇ ನಟಿಯು ಕೊನೆಯುಸಿರೆಳೆದಿದ್ದಾರೆ. ಇದರಿಂದ ಅವರ ಕುಟುಂಬಸ್ಥರು ಹಾಗೂ ಸ್ನೇಹಿತರು ತೀವ್ರ ದುಃಖಕ್ಕೆ ಒಳಗಾಗಿದ್ದಾರೆ.

ಎದೆ ನೋವು ಕಾಣಿಸಿದ ತಕ್ಷಣ ಶೆಫಾಲಿ ಜರಿವಾಲಾ ಅವರನ್ನು ಪತಿ ಪರಾಗ್ ತ್ಯಾಗಿ ಹಾಗೂ ಮೂವರು ವ್ಯಕ್ತಿಗಳು ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರೂ ಕೂಡ ನಟಿಯನ್ನು ಉಳಿಸಿಕೊಳ್ಳಲು ಆಗಲಿಲ್ಲ. ಆಸ್ಪತ್ರೆಯಿಂದ ಹೊರ ಬರುವಾಗ ಪರಾಗ್ ತ್ಯಾಗಿ ಯಾವುದೇ ಪ್ರತಿಕ್ರಿಯೆಗಳನ್ನು ನೀಡದೇ ಹಾಗೇ ಹೋದರೂ ಎನ್ನಲಾಗಿದೆ. 2002ರಲ್ಲಿ ಕಾಂತ ಲಗಾ ಎನ್ನುವ ಹಾಡಿನ ಮೂಲಕ ಶೆಫಾಲಿ ಜರಿವಾಲಾ ಹೆಚ್ಚು ಪ್ರಖ್ಯಾತಿಯನ್ನು ಪಡೆದಿದ್ದರು. ಹಿಂದಿ ಬಿಗ್‌ಬಾಸ್- 13ರಲ್ಲಿ ಶೆಫಾಲಿ ಕಾಣಿಸಿಕೊಂಡಿದ್ದರು. ಶೆಫಾಲಿ ಜರಿವಾಲಾ ಹಾಗೂ ಉತ್ತರ ಪ್ರದೇಶ ಮೂಲದ ಪರಾಗ್ ತ್ಯಾಗಿ ಅವರು 2014ರಲ್ಲಿ ಮದುವೆಯಾಗಿದ್ದರು. ಇದಾದ ಮೇಲೆ ಹಲವಾರು ರಿಯಾಲಿಟಿ ಶೋಗಳಲ್ಲಿ ಕಾಣಿಸಿಕೊಂಡಿದ್ದರು. ಪರಾಗ್ ತ್ಯಾಗಿ, ಶೆಫಾಲಿ ಜರಿವಾಲಾ ಟೆಲಿವಿಷನ್ ಹಾಗೂ ಸಿನಿಮಾ ಎರಡರಲ್ಲೂ ಕೆಲಸ ಮಾಡುತ್ತಿದ್ದರು. ಶೆಫಾಲಿ ಜರಿವಾಲಾ ಅವರು ಗುಜರಾತ್‌ನ ಅಹಮದಾಬಾದ್‌ನಲ್ಲಿ 15 ಡಿಸೆಂಬರ್ 1982 ರಂದು ಜನಿಸಿದ್ದರು. 2002ರಲ್ಲಿ ಕಾಂತ ಲಗಾ ಹಾಡಿನ ಮೂಲಕ ಹೆಸರಾಗಿದ್ದ ಶೆಫಾಲಿ, ರಾತ್ರೋರಾತ್ರಿ ಸೆನ್ಸೇಷನ್ ಕ್ರಿಯೇಟ್ ಮಾಡಿದ್ದರು ಎನ್ನಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!