ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಭರ್ಜರಿ ಜಯ

ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಪ್ರಥಮ ಇನಿಂಗ್ಸ್ನಲ್ಲಿ 180 ರನ್ ಕಲೆಹಾಕಿದರೆ, ವೆಸ್ಟ್ ಇಂಡೀಸ್ 190 ರನ್‌ಗಳಿಸುವುದರ ಜೊತೆ ಭರ್ಜರಿ ಜಯ ಸಾಧಿಸಿತು. ಇನ್ನು ದ್ವಿತೀಯ ಇನಿಂಗ್ಸ್ನಲ್ಲಿ ಆಸ್ಟ್ರೇಲಿಯಾ ಪರ ಟ್ರಾವಿಸ್ ಹೆಡ್ ಅಧ್ಧೂರಿ ಪ್ರದರ್ಶನ ನೀಡಿದ್ದಾರೆ.

 

ಆಸ್ಟ್ರೇಲಿಯಾ ತಂಡದ ಸ್ಫೋಟಕ ದಾಂಡಿಗ ಟ್ರಾವಿಸ್ ಹೆಡ್ ಟೆಸ್ಟ್ ಕ್ರಿಕೆಟ್‌ನಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿಗಳನ್ನು ಪಡೆಯುವ ಮೂಲಕ ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದ ಟ್ರಾವಿಸ್ ಹೆಡ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ 59 ರನ್ ಬಾರಿಸಿದ್ದ ಹೆಡ್, ದ್ವಿತೀಯ ಇನಿಂಗ್ಸ್ನಲ್ಲಿ 61 ರನ್ ಕಲೆಹಾಕಿದ್ದರು. ಈ ಎರಡು ಅರ್ಧಶತಕಗಳೊಂದಿಗೆ ಟ್ರಾವಿಸ್ ಹೆಡ್ ಆಸ್ಟ್ರೇಲಿಯಾ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಈ ಗೆಲುವಿನೊಂದಿಗೆ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಹೆಡ್ ಪಾಲಾಯಿತು. ವಿಶೇಷ ಎಂದರೆ ಇದು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಸರಣಿಯಲ್ಲಿ ಟ್ರಾವಿಸ್ ಹೆಡ್ ಅವರ 10ನೇ ಪಂದ್ಯ ಶ್ರೇಷ್ಠ ಪ್ರಶಸ್ತಿ ಕೂಡ ಆಗಿತ್ತು. ಇದರೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಸರಣಿಯಲ್ಲಿ ಅತ್ಯಧಿಕ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದ ಆಟಗಾರ ಎಂಬ ವಿಶ್ವ ದಾಖಲೆ ಟ್ರಾವಿಸ್ ಹೆಡ್ ಪಾಲಾಗಿದೆ.

ಹೆಡ್ ಅವರನ್ನು ಹೊರತುಪಡಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಸರಣಿಯಲ್ಲಿ ಯಾವುದೇ ಬ್ಯಾಟರ್ ಎರಡಂಕಿಯಷ್ಟು ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿಲ್ಲ ಎಂಬುದು ವಿಶೇಷ. ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ಬೆನ್ ಸ್ಟೋಕ್ಸ್. ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕ ಈವರೆಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಸರಣಿಯಲ್ಲಿ 5 ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ. ಇದೀಗ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಆಡಿದ 50 ಪಂದ್ಯಗಳಲ್ಲಿ 10 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ತನ್ನದಾಗಿಸಿಕೊಳ್ಳುವ ಮೂಲಕ ಟ್ರಾವಿಸ್ ಹೆಡ್ ಇತಿಹಾಸ ನಿರ್ಮಿಸಿದ್ದಾರೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!