ಜನ ಮನದ ನಾಡಿ ಮಿಡಿತ

Advertisement

ಫರಂಗಿಪೇಟೆ: ಅಡ್ಯಾರ್‌ನಿಂದ ಫರಂಗಿಪೇಟೆ ಮೂಲಕ ಕಡೆಗೋಳಿವರೆಗೆ ಅಭಿಯಾನ

ರಾಷ್ಟ್ರೀಯ ಹೆದ್ದಾರಿ 75ರ ಮಂಗಳೂರು- ಬಿ.ಸಿ.ರೋಡು ಹೆದ್ದಾರಿಯನ್ನು ತ್ಯಾಜ್ಯ ಮುಕ್ತಗೊಳಿಸುವ ನಿಟ್ಟಿನಲ್ಲಿ ಸ್ವಚ್ಛತೆಗಾಗಿ ನಿಮ್ಮೊಂದಿಗೆ ನಾವು, ನಮ್ಮೊಂದಿಗೆ ನೀವು ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಇದರ ಭಾಗವಾಗಿ ಅಡ್ಯಾರ್‌ನಿಂದ ಫರಂಗಿಪೇಟೆ ಮೂಲಕ ಕಡೆಗೋಳಿವರೆಗೆ ಸ್ವಚ್ಛತಾ ಅಭಿಯಾನ ನಡೆಸಲಾಯಿತು.

ದ.ಕ.ಜಿಲ್ಲಾಡಳಿತ, ದ.ಕ.ಜಿ.ಪಂ.ಸ್ವಚ್ಛ ಭಾರತ್ ಮಿಷನ್,ಪುದು ಗ್ರಾ.ಪಂ., ಅಡ್ಯಾರ್ ಗ್ರಾ.ಪಂ. ಹಾಗೂ ಹಸಿರು ದಳ ಮಂಗಳೂರು ಆಶ್ರಯದಲ್ಲಿ ದ.ಕ.ಜಿ.ಪಂ.ಉಪಕಾರ್ಯದರ್ಶಿ ಜಯಲಕ್ಷ್ಮೀ ರಾಯಕೋಡ್ ಅವರ ಮಾರ್ಗದರ್ಶನದಲ್ಲಿ ಹೆದ್ದಾರಿ ಬದಿಯ ತ್ಯಾಜ್ಯಗಳನ್ನು ತೆರವು ಮಾಡಲಾಯಿತು. ಎರಡು ಗ್ರಾ.ಪಂ.ತ0ಡದ ಜತೆಗೆ ಸ್ವಚ್ಛ ಭಾರತ್ ಮಿಷನ್ ತಂಡ, ಹಸಿರು ದಳದ ಕಾರ್ಯಕರ್ತರು, ಮಂಗಳೂರು ಸಂತ ಅಲೋಶಿಯಸ್ ಕಾಲೇಜು ಕಾರ್ಯಕ್ರಮದಲ್ಲಿ ಭಾಗಿಯಾಗಿತ್ತು. ಅಭಿಯಾನದ ಭಾಗವಾಗಿ ಈಗಾಗಲೇ ಹಸಿರು ದಳದ ನೇತೃತ್ವದಲ್ಲಿ ವೇಸ್ಟ್ ಡಪ್ಪಿಂಗ್ ಸ್ಕ್ವಾಡ್ ರಚನೆಗೊಂಡು ಅದರ ತಂಡದ ಸದಸ್ಯರು ಹೆದ್ದಾರಿ ಬದಿ ಬೆಳಗ್ಗೆ ಹಾಗೂ ಸಂಜೆಯ ಹೊತ್ತು ನಿಂತು ತ್ಯಾಜ್ಯ ಎಸೆಯದಂತೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ವಿವಿಧ ಸಂಘ ಸಂಸ್ಥೆಗಳ ತಂಡಗಳು, ಸ್ವಸಹಾಯ ಗುಂಪುಗಳ ಸದಸ್ಯರು, ಕಾಲೇಜುಗಳ ತಂಡಗಳು ಕೂಡ ಜಾಗೃತಿ ಕಾರ್ಯದಲ್ಲಿ ಭಾಗಿಯಾಗಿದೆ.

Leave a Reply

Your email address will not be published. Required fields are marked *

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

error: Content is protected !!