ಬ್ರಹ್ಮಾವರದಲ್ಲಿ ಗೋವಿನ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಪ್ರತಿಕ್ರಿಯಿಸಿದ್ದಾರೆ.

ಇವರು ಮಂಗಳೂರಿನಲ್ಲಿ ಮಾತನಾಡಿ, ಆರೋಪಿಗಳನ್ನು ಪೊಲೀಸರು ಬಂಧಿಸುವ ಕೆಲಸ ಮಾಡಿದ್ದಾರೆ. 6 ಮಂದಿ ಆರೋಪಿಗಳನ್ನು ಬಂಧಿಸಿದ ಪೊಲೀಸರ ಕಾರ್ಯ ಶ್ಲಾಘನೀಯ ಎಂದಿದ್ದಾರೆ. ಪೊಲೀಸರು ಕಾನೂನು ರೀತಿಯಲ್ಲಿಯೇ ಉತ್ತರ ನೀಡಿದ್ದಾರೆ ಎಂದು ಪದ್ಮರಾಜ್ ಹೇಳಿದ್ರು.



