ಜನ ಮನದ ನಾಡಿ ಮಿಡಿತ

Advertisement

ಹೆಜಮಾಡಿ: ಹೆಜಮಾಡಿ ಬಳಿ ಬೆಳಗ್ಗಿನ ಜಾವ ಭೀಕರ ಅಪಘಾತ…!

ಹೆಜಮಾಡಿ ಟೋಲ್ ಪ್ಲಾಝಾದ ಬಳಿ ಪಾರ್ಕ್ ಮಾಡಲಾದ ಲಾರಿಯೊಂದರ ಹಿಂಬದಿಗೆ ಇನ್ನೋವಾ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಲ್ಲಿದ್ದ ಇಬ್ಬರು ಪ್ರಯಾಣಿಕರು ಗಾಯಗೊಂಡ ಘಟನೆ ಸಂಭವಿಸಿದೆ.

ಕೋಡಿಕರೆ ನಿವಾಸಿ 43 ರ ಹರೆಯದ ಲೋಕೇಶ್ ಹಾಗೂ ಕುಳಾಯಿ ನಿವಾಸಿ 29ರ ಹರೆಯದ ವಿರಾಜ್ ಗಾಯಗೊಂಡಿದ್ದಾರೆ. ಇವರು ಕಾರ್ಯಕ್ರಮಕ್ಕೆ ತೆರಳಿ ಬೆಳಗ್ಗಿನ ಜಾವ ವಾಪಾಸಾಗುತ್ತಿದ್ದಾಗ, ಈ ಘಟನೆ ನಡೆದಿದೆ. ಮರದ ದಿಮ್ಮಿಗಳನ್ನು ಹೇರಿಕೊಂಡಿದ್ದ ಲಾರಿಯನ್ನು ಹೆಜಮಾಡಿ ಟೋಲ್ ಗೇಟಿನ ಕೆಲವೇ ಮೀಟರ್‌ಗಳ ಅಂತರದಲ್ಲಿ ಪಾರ್ಕ್ ಮಾಡಲಾಗಿತ್ತು. ಇದನ್ನು ಗಮನಿಸದ ಕಾರು ಚಾಲಕ ಹಿಂಬದಿಯಿಂದ ಗುದ್ದಿದ್ದಾನೆ. ಡಿಕ್ಕಿಯ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದೆ. ಕಾರಿನಲ್ಲಿ ಸಿಲುಕಿಕೊಂಡಿದ್ದ ವಿರಾಜ್‌ರನ್ನು ಹೊರತೆಗೆಯಲು ಸ್ಥಳೀಯರು ಮತ್ತು ಟೋಲ್ ಸಿಬ್ಬಂದಿ ಸುಮಾರು ಒಂದು ಗಂಟೆಗಳ ಕಾಲ ಶ್ರಮಿಸಿದ್ದಾರೆ ಎಂದು ತಿಳಿದು ಬಂದಿದೆ.

ಗಾಯಾಳುಗಳಿಬ್ಬರನ್ನೂ ಮಂಗಳೂರಿನ ಎಜೆ ಆಸ್ಪತ್ರೆಗೆ ಸಾಗಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಪಡುಬಿದ್ರಿ ಪೊಲೀಸರು ಆಗಮಿಸಿದ್ದು, ತನಿಖೆ ನಡೆಸಿದ್ದಾರೆ. ಕೋಡಿಕರೆ ನಿವಾಸಿ ಲೋಕೇಶ್ ಅವರು ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸ್ಥಾಪಕಧ್ಯಕ್ಷ ಮತ್ತು ಹಿಂದೂ ಸಂಘಟನೆಯ ಮುಖಂಡರು ಆಗಿದ್ದು, ಅಪಾರ ಯುವಕರ ತಂಡದ ಅಭಿಮಾನಿಗಳು ಇದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಭೀಕರ ರಸ್ತೆ ಅಪ*ಘಾತ….!

ಮಂಗಳೂರು: ಎಂ.ಆರ್.ಜಿ.ಗ್ರೂಪ್ ಗೆ ಹಾರುವ ಹಕ್ಕಿ ಸೇರ್ಪಡೆ..!

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

error: Content is protected !!