ಜನ ಮನದ ನಾಡಿ ಮಿಡಿತ

Advertisement

ದಕ್ಷಿಣ ಕನ್ನಡದಲ್ಲಿ ವಿಪರೀತ ಮಳೆ: 50 ಕ್ಕೂ ಹೆಚ್ಚು ಮನೆಗಳಿಗೆ ಹಾನಿ, ಸುಬ್ರಹ್ಮಣ್ಯ-ಮಂಜೇಶ್ವರ ಹೆದ್ದಾರಿ ಸ್ಥಗಿತ

ಶನಿವಾರ ರಾತ್ರಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಗೆ ಜಿಲ್ಲೆಯ ನದಿ, ತೊರೆಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಗಾಳಿ ಮಳೆಗೆ ಈವರೆಗೆ 50ಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿದೆ. 300ಕ್ಕೂ ಅಧಿಕ ವಿದ್ಯುತ್ ಕಂಬಗಳು ನೆಲಕಚ್ಚಿದೆ. 10ಕ್ಕೂ ಅಧಿಕ ಟ್ರಾನ್ಸ್‌ಫಾರ್ಮರ್​ಗಳು ಕೆಟ್ಟು ಹೋಗಿವೆ. ತೋಟಗಾರಿಕಾ ಬೆಳೆಗಳು ಭೂಸ್ಪರ್ಶಿಸಿದರೆ, ನದಿಗಳ ಪ್ರವಾಹದಿಂದ ಅಲ್ಲಲ್ಲಿ ಭತ್ತದ ಬೆಳೆ ಪ್ರವಾಹಕ್ಕೆ ಕೊಚ್ಚಿಹೋಗಿದೆ.


ಜಿಲ್ಲಾಡಳಿತದಿಂದ ತೆರೆದಿರುವ 5 ಕಾಳಜಿ ಕೇಂದ್ರಗಳಿಗೆ 35ಕ್ಕೂ ಅಧಿಕ ಮಂದಿಯನ್ನು ಸ್ಥಳಾಂತರ ಮಾಡಲಾಗಿದೆ. ಎಡೆಬಿಡದೆ ಸುರಿಯುತ್ತಿರುವ ಜೋರು ಮಳೆಯಿಂದಾಗಿ ಕುಮಾರಧಾರಾ ನದಿ ನೀರಿನ ಮಟ್ಟ ಏರುತ್ತಿದೆ. ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ. ನದಿ ನೀರಿಗೆ ತೀರ್ಥಸ್ನಾನಕ್ಕೆ ಹೋಗದಂತೆ ದೇವಾಲಯದ ಭಕ್ತರಿಗೆ ಸೂಚನೆಯನ್ನು ನೀಡಲಾಗಿದೆ. ಭಕ್ತರು ಸ್ನಾನಘಟ್ಟಕ್ಕೆ ಇಳಿಯದಂತೆ ಪೊಲೀಸರು, ಗೃಹರಕ್ಷಕ ದಳದ ಸಿಬ್ಬಂದಿ ಸ್ನಾನ ಘಟ್ಟದ ಬಳಿ ಕಾವಲು ಕಾಯುತ್ತಿದ್ದಾರೆ.


ದ.ಕ., ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್: ದ.ಕ.ದಲ್ಲಿ ಆರೆಂಜ್ ಅಲರ್ಟ್ ನಡೆಯಲಿದೆ. ಮುಂದಿನ 2 ದಿನಗಳ ಕಾಲ ಜಿಲ್ಲೆಯಲ್ಲಿ ಕರಾವಳಿಯಲ್ಲಿ ಗಂಟೆಗೆ 40-45 ಕಿ.ಮೀ. ಬಲವಾದ ಗಾಳಿ ಬೀಸುವ ಕಾರಣ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಜು.24, 25ರಂದು ಆರೆಂಜ್ ಅಲರ್ಟ್ ನೀಡಲಾಗಿದ್ದು, ಜು.25ರಿಂದ 28ರವರೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಸಂಪರ್ಕ ಸಂಖ್ಯೆ: ನೈಸರ್ಗಿಕ ವಿಕೋಪಗಳಿಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ತುರ್ತು ಸೇವೆಯ ಟೋಲ್ ಫ್ರೀ ಸಂಖ್ಯೆ 1077 ಅಥವಾ ನಿಯಂತ್ರಣ ಕೊಠಡಿ ಸಂಖ್ಯೆ 0824-2442590 ಅನ್ನು ಸಂಪರ್ಕಿಸಬಹುದು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!