ಅಬ್ದುಲ್ ರಹಿಮಾನ್ ಮತ್ತು ಅಶ್ರಫ್ ವಯನಾಡು ಕೊಲೆ ಕೃತ್ಯದ ಪ್ರಮುಖ ಆರೋಪಿಗಳ ಬಂಧನದ ವಿಳಂಬ ಮತ್ತು ಪರಿಹಾರ ಘೋಷಿಸದ ಸರಕಾರದ ನಡೆಯನ್ನು ವಿರೋಧಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾ ಕಛೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಪರಿಹಾರಕ್ಕೆ ಆಗ್ರಹಿಸಿದ್ದಾರೆ. 
ಎಸ್‌ಸಿಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಅವರು ಮಾತನಾಡಿ, ಅಬ್ದುಲ್ ರಹಿಮಾನ್ ಮತ್ತು ಅಶ್ರಫ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನೈಜ್ಯ ಆರೋಪಿಯನ್ನು ಇದುವರೆಗೂ ಬಂಧಿಸಿಲ್ಲ. ಕುಟುಂಬಕ್ಕೆ ಪರಿಹಾರ ಧನವನ್ನು ಸರಕಾರ ನೀಡಿಲ್ಲ. ಈ ಪ್ರಕರಣದಲ್ಲಿ ಪಾತ್ರದಾರಿಗಳ ಬಂಧನ ಮಾತ್ರ ಆಗಿದೆ ಆದರೆ ಸೂತ್ರಧಾರಿಗಳ ಬಂಧನ ಆಗಿಲ್ಲ. ಅವರು ನಡೆಯುತ್ತಾ ಇದ್ದಾರೆ. ಕೂಡಲೇ ಅವರ ಬಂಧನ ಆಗಬೇಕು. ಸರಕಾರ ಮೃತ ಕುಟುಂಬಕ್ಕೆ ,50ಲಕ್ಷ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷರಾದ ಮೊನೀಶ್ ಅಲಿ, ನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಮಾಲ್ ಜೋಕಟ್ಟೆ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ರು.



