ಜನ ಮನದ ನಾಡಿ ಮಿಡಿತ

Advertisement

ಉಳ್ಳಾಲ: ಕುಡಿತದ ನಶೆಯಲ್ಲಿ ಗಾಜು ಒಡೆದ ವಿವಾಹಿತ ದಾರುಣ ಸಾವು

ಕುಡಿತದ ನಶೆಯಲ್ಲಿ ಮನೆಯ ಷೋಕೇಸ್ ಗಾಜು ಕೈಯಲ್ಲೇ ಒಡೆದ ಪರಿಣಾಮ ವಿವಾಹಿತನೋರ್ವ ತೀವ್ರ ರಕ್ತಸ್ರಾವ ಉಂಟಾಗಿ ಸಾವನ್ನಪ್ಪಿರುವ ಘಟನೆ ಮಾಡೂರು ಸೈಟ್‌ನಲ್ಲಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ. ಮಾಡೂರ್ ಸೈಟ್ ನಿವಾಸಿ ಸತೀಶ್ ನಾಯಕ್ ಎಂಬವರ ಪುತ್ರ 38 ವರ್ಷದ ನಿತೇಶ್ ನಾಯಕ್ ಸಾವನ್ನಪ್ಪಿದ್ದಾನೆ.

ಕೋಟೆಕಾರು ಬೀರಿ ಜಂಕ್ಷನ್ ಸಮೀಪವೇ ತಂದೆ ಹಾಗೂ ಸಹೋದರನ ಜೊತೆಗೆ ಗಲಾಟೆ ನಡೆಸುತ್ತಾ ಬಂದಿದ್ದ ನಿತೇಶ್, ಮನೆಯಲ್ಲಿಯೂ ಸಹ ನಿತ್ಯದಂತೆ ಗಲಾಟೆ ನಡೆಸುತ್ತಿದ್ದರೆಂದು ತಿಳಿದುಬಂದಿದೆ. ಈ ವೇಳೆ ಆಕ್ರೋಶದಿಂದ ಮನೆಯೊಳಗಿರುವ ಷೋಕೇಸ್ ಗಾಜನ್ನು ಒಡೆದಿದ್ದರಿಂದಾಗಿ, ಷೋಕೇಸ್ ಗಾಜು ಒಡೆದು ಕೈಯಲ್ಲಿರುವ ಪ್ರಮುಖ ನರಕ್ಕೆ ತಗಲಿ ತೀವ್ರ ರಕ್ತಸ್ರಾವ ಉಂಟಾಗಿ ಮೃತಪಟ್ಟಿದ್ದಾರೆ.

ನಿತೇಶ್, ಸಹೋದರ ಇಬ್ಬರೂ ತಿಂಡಿ ಲೈನ್ ಸೇಲ್ ನಡೆಸುತ್ತಿದ್ರು. ನಿನ್ನೆಯೂ ಕರ್ತವ್ಯ ಮುಗಿಸಿ ಮನೆಗೆ ವಾಪಾಸ್ಸಾದ ಬಳಿಕ ಗಲಾಟೆ ಮಾಡಿಕೊಂಡಿದ್ದಾರೆ. ವಿವಾಹಿತರಾಗಿದ್ದ ಅವರು ಪತ್ನಿ ಜೊತೆಗೆ ವಿಚ್ಛೇದನ ಪಡೆದಿದ್ರು. ಮೃತರ ತಾಯಿ ನೀಡಿದ ದೂರಿನಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!