ಕರಾವಳಿ ಜಿಲ್ಲೆಯಲ್ಲಿ ಆದಷ್ಟು ಬೇಗನೆ ವಿಜಯಪುರದ ನಂತರದ ಸಚಿವ ಸಂಪುಟ ಸಭೆ ನಡೆಯಬೇಕು. ಅದು ಅಭಿವೃದ್ಧಿ ಕಾರ್ಯಗಳಿಗೆ ವೇಗವನ್ನು ನೀಡಲಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷರು, ವಿಧಾನ ಪರಿಷತ್ ಶಾಸಕರಾದ ಐವನ್ ಡಿಸೋಜ ಹೇಳಿದ್ದಾರೆ.
ಇವರು ಮಂಗಳೂರಿನ ಮನಪಾದಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಕರಾವಳಿ ಜಿಲ್ಲೆಯಲ್ಲಿ ಸಚಿವ ಸಂಪುಟ ಸಭೆ ನಡೆಯುವುದರಿಂದ ಈ ಭಾಗದ ಸಮಸ್ಯೆಗಳು ಅಧಿಕಾರಿಗಳಿಗೆ ತಿಳಿಯಲಿದೆ. ಇದರಿಂದ ಕರಾವಳಿ ಭಾಗದ ಶಾಶ್ವತ ಸಮಸ್ಯೆಗಳ ಪರಿಹಾರದ ಜೊತೆಗೆ ಯೋಜನೆಗಳ ಅನುಷ್ಠಾನ ಆಗಲಿದೆ. ಪ್ರವಾಸೋದ್ಯಮ ಈ ಜಿಲ್ಲೆಯಲ್ಲಿ ದೊಡ್ಡ ಮಟ್ಟದ ಅಭಿವೃದ್ಧಿ ಕಾಣಲಿದ್ದು, ಇದರಿಂದ ಕರಾವಳಿ ಭಾಗ ಸಾಕಷ್ಟು ದೊಡ್ಡ ಮಟ್ಟದಲ್ಲಿ ಬೆಳೆಯಲಿದೆ ಎಂದಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಭಾಸ್ಕರ್,ನಾಗೇಂದ್ರ,ಸಲೀಮ್, ವಸಂತ ಶೆಟ್ಟಿ ಉಪಸ್ಥಿತರಿದ್ರು.



