ಜನ ಮನದ ನಾಡಿ ಮಿಡಿತ

Advertisement

ಮಂಗಳೂರು ಹೊರವಲಯದ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಪ್ರಾಣಿಗಳ ನಿಗೂಢ ಸಾವು…!

ಮಂಗಳೂರು ಹೊರವಲಯದ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಪ್ರಾಣಿಗಳು ನಿಗೂಢವಾಗಿ ಮೃತಪಟ್ಟಿವೆ. ಕೇವಲ ಒಂದು ವಾರದಲ್ಲೇ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಒಂಬತ್ತು ಪ್ರಾಣಿಗಳು ಮೃತಪಟ್ಟಿರುವ ಬಗ್ಗೆ ಮಾಹಿತಿ ದೊರೆತಿದೆ.

2 ಕೃಷ್ಣಮೃಗ, 5 ಪುನುಗು ಬೆಕ್ಕು, 1 ಬಿಳಿ ಗೂಬೆ ಹಾಗೂ 1 ಬರಿಂಕ ಸೇರಿದಂತೆ ಒಟ್ಟು 9 ಪ್ರಾಣಿಗಳು ಮೃತಪಟ್ಟಿವೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ಪಿಲಿಕುಳ ಜೈವಿಕ ಉದ್ಯಾನವನದೊಳಗೆ ನೀರು ನುಗ್ಗಿ, ಕಂಪೌ0ಡ್ ಕುಸಿದು ಪ್ರಾಣಿಗಳಿಗೆ ತೊಂದರೆಯಾಗಿತ್ತು. ಈ ಬಗ್ಗೆ ವನ್ಯಜೀವಿ ಸಂರಕ್ಷಕ ಭುವನ್ ದೇವಾಡಿಗ ಅವರು ಸೆಂಟ್ರಲ್ ಝೂ ಅಥಾರಿಟಿಗೆ ದೂರು ನೀಡಿದ್ರು. ಈ ದೂರಿನನ್ವಯ ಮುಖ್ಯ ವನ್ಯಜೀವಿ ವಾರ್ಡನ್‌ಗೆ ಶೋಕಾಸ್ ನೋಟಿಸ್ ನೀಡಲಾಗಿತ್ತು. ಇದಾಗಿ ವಾರದೊಳಗೆ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಒಂಬತ್ತು ಪ್ರಾಣಿಗಳು ಮೃತಪಟ್ಟ ಬಗ್ಗೆ ಮಾಹಿತಿ ದೊರೆತಿದೆ. ಪಿಲಿಕುಳದಲ್ಲಿ 5 ಪುನುಗು ಬೆಕ್ಕುಗಳು, 2 ಕೃಷ್ಣಮೃಗ ಮತ್ತು ಒಂದು ಬರಿಂಕ ಮಾತ್ರ ಮೃತಪಟ್ಟಿದ್ದು, ಮಳೆಯ ಹಿನ್ನೆಲೆಯಲ್ಲಿ ಶೀತ ವಾತಾವರಣ ಹೆಚ್ಚಾದ ಪರಿಣಾಮ ಈ ಪ್ರಾಣಿಗಳು ಮೃತಪಟ್ಟಿವೆ ಎಂದು ಜೈವಿಕ ಉದ್ಯಾನವನದ ಪ್ರಭಾರ ನಿರ್ದೇಶಕರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!