ಭಾರತದ ಕ್ರೀಡಾ ಇತಿಹಾಸದಲ್ಲೇ ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆದಿರುವ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ “ನೀರಜ್ ಚೋಪ್ರಾ ಕ್ಲಾಸಿಕ್- 2025” ಜಾವೆಲಿನ್ ಎಸೆತ ಕ್ರೀಡಾಕೂಟ ನಡೆದಿದೆ.

ಇದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರ ಜೊತೆಯಾಗಿ ಪಾಲ್ಗೊಂಡು, ವಿಶ್ವಶ್ರೇಷ್ಠ ಜಾವೆಲಿನ್ ಎಸೆತಗಾರರ ಕ್ರೀಡಾ ಪ್ರದರ್ಶನವನ್ನು ವೀಕ್ಷಿಸಿ, ವಿಜೇತರಿಗೆ ಪದಕ ಪ್ರದಾನ ಮಾಡಿ ಗೌರವಿಸಿದ್ರು.
2 ಬಾರಿ ಒಲಿಂಪಿಕ್ ಪದಕ ವಿಜೇತ, ಹಾಲಿ ವಿಶ್ವಚಾಂಪಿಯನ್, ವಿಶ್ವನಂ. 1 ಜಾವಲಿನ್ ಪಟು ನೀರಜ್ ಚೋಪ್ರ ತಮ್ಮ ಹೆಸರಿನಲ್ಲಿ ಆರಂಭಿಸಿರುವ ಅಂತಾರಾಷ್ಟ್ರೀಯ ಜಾವಲಿನ್ ಕೂಟವು ಜಾವಲಿನ್ ಎಸೆತದಲ್ಲಿನ ದಿಗ್ಗಜರ ಕ್ರೀಡಾ ಸಾಮರ್ಥ್ಯ ಪ್ರದರ್ಶನದ ವೇದಿಕೆಯಾಗಿದ್ದು, ಮುಂದೆಯೂ ಇಂತಹ ಕ್ರೀಡಾಕೂಟದಲ್ಲಿ ರಾಜ್ಯದಲ್ಲಿ ಆಯೋಜನೆಗೊಂಡು ಯುವ ಜನರನ್ನು ಕ್ರೀಡೆಯತ್ತ ಆಕರ್ಷಿಸಲಿ ಎಂದು ಶುಭಹಾರೈಸಿದ್ರು.



