ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಅಪ್ರಾಪ್ತ ಬಾಲಕನೊರ್ವ ನೇಣು ಬಿಗಿದು ಆತ್ಮಹತ್ಯೆ

ಅಪ್ರಾಪ್ತ ಬಾಲಕನೊರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತುಂಬೆ ಗ್ರಾಮದ ಪರ್ಲಕ್ಕೆ ಎಂಬಲ್ಲಿ ಜುಲೈ 7 ರಂದು ಸಂಜೆ ವೇಳೆ ನಡೆದಿದೆ.

ತುಂಬೆ ಪರ್ಲಕ್ಕೆ ನಿವಾಸಿ ಕರುಣಾಕರ ಗಟ್ಟಿ ಅವರ ಏಕೈಕ ಪುತ್ರ ಆತ್ಮಹತ್ಯೆ ಮಾಡಿಕೊಂಡ ಬಾಲಕನಾಗಿದ್ದಾನೆ. ತೇಜಸ್ ಮೊಡಂಕಾಪು ಕಾಲೇಜೊಂದರಲ್ಲಿ ಪಿಯುಸಿ ವಿದ್ಯಾರ್ಥಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಇವತ್ತು ಆತನಿಗೆ ಪರೀಕ್ಷೆ ಇದ್ದು, ಸಂಜೆ ವೇಳೆ ಕ್ಲಾಸಿನಿಂದ ಮನೆಗೆ ಬಂದಿದ್ದಾನೆ. ತಂದೆ ತಾಯಿ ಇಬ್ಬರು ಖಾಸಗಿ ಕೆಲಸದಲ್ಲಿರುವ ಕಾರಣ ಅವರು ಮನೆಗೆ ಬರುವಾಗ ರಾತ್ರಿಯಾಗುತ್ತದೆ. ಮಗ ಎಂದಿನAತೆ ಸಂಜೆ ಮನೆಗೆ ಬಂದು ಮನೆಯಲ್ಲಿ ಇರುತ್ತಾನೆ. ಅದೇ ರೀತಿ ತಂದೆ ಮನೆಗೆ ಬಂದಾಗ ಬಾಗಿಲು ಹಾಕಿದ್ದು, ಕಂಡು ಮನೆಯೊಳಗೆ ನೋಡಿದಾಗ ಕೋಣೆಯಲ್ಲಿ ಈತ ನೇಣು ಬಿಗಿದು ನೇತಾಡುವುದು ಕಂಡು ಬಂದಿದೆ. ಕೂಡಲೇ ಆಸ್ಪತ್ರೆಗೆ ತರಲಾಗಿದೆಯಾದರೂ ಆತ ಮೃತಪಟ್ಟಿರುವುದಾಗಿ ವೈದ್ಯರು ಪರೀಕ್ಷಿಸಿ ತಿಳಿಸಿದ್ದಾರೆ. ಘಟನೆಗೆ ಸ್ಪಷ್ಟವಾದ ಕಾರಣ ಇನ್ನೂ ಕೂಡ ತಿಳಿದು ಬಂದಿಲ್ಲ, ಗ್ರಾಮಾಂತರ ಪೋಲೀಸರು ಸ್ಥಳಕ್ಕೆ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!