ಜನ ಮನದ ನಾಡಿ ಮಿಡಿತ

Advertisement

ಕುಂದಾಪುರ: 6ನೇ ವಾರ್ಷಿಕ ಬೃಹತ್ ರಕ್ತದಾನ ಶಿಬಿರ ಕಾರ್ಯಕ್ರಮ; ಕುಂದಾಪುರ ಆನಗಳ್ಳಿಯ ಗೆಳೆಯರ ಬಳಗ ಸಭಾಂಗಣದಲ್ಲಿ ಆಯೋಜನೆ

6ನೇ ವಾರ್ಷಿಕ ಬೃಹತ್ ರಕ್ತದಾನ ಶಿಬಿರ ಕಾರ್ಯಕ್ರಮ ಕುಂದಾಪುರ ಆನಗಳ್ಳಿಯ ಗೆಳೆಯರ ಬಳಗ ಸಭಾಂಗಣದಲ್ಲಿ ನಡೆಯಿತು. ದತ್ತಾಶ್ರಮ ಆಧಿಶಕ್ತಿ ಮಠ, ಚಾರಿಟೇಬಲ್ ಟ್ರಸ್ಟ್ ಆನಗಳ್ಳಿ, ಗೆಳೆಯರ ಬಳಗ(ರಿ) ಆನಗಳ್ಳಿ, ಉಡುಪಿ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್, ರಿಜಾಯ್ಸ್ ಈವೆಂಟ್, ಮಣಿಪಾಲ ಕೆಎಂಸಿ ಹಾಸ್ಪಿಟಲ್, ಭಾರತೀಯ ರೆಡ್ ಕ್ರಾಸ್ ರಕ್ತನಿಧಿ ಸಹಯೋಗದೊಂದಿಗೆ ಶಿಬಿರ ನಡೆದಿದೆ.

ಗೀತಾಂದ ಫೌಂಡೇಶನ್‌ನ ಅಧ್ಯಕ್ಷ ಆನಂದ ಸಿ.ಕುಂದರ್ 6ನೇ ವಾರ್ಷಿಕ ಬೃಹತ್ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿದ್ರು. ಬಳಿಕ ಅವರು ಮಾತನಾಡಿ, ಜಗತ್ತಿನಲ್ಲಿ ಬೇರೆ ಬೇರೆ ಟೆಕ್ನಾಲಜಿ ಬಂದಿರಬಹುದು ಆದರೆ ರಕ್ತಕ್ಕೆ ಪರ್ಯಾಯ ವ್ಯವಸ್ಥೆಯನ್ನು ಮಾಡಿಕೊಳ್ಳಲಿಕ್ಕೆ ಮನುಷ್ಯನಿಗೆ ಇನ್ನೂ ಸಾಧ್ಯವಾಗಲಿಲ್ಲ ವಿಜ್ಞಾನಿಗಳಿಗೆ ಸಾಧ್ಯವಾಗಲಿಲ್ಲ ರಕ್ತದಾನಿಗಳು ಹೆಚ್ಚು ಹೆಚ್ಚು ರಕ್ತದಾನ ಮಾಡುವ ಮೂಲಕ ಹಲವು ಜೀವಗಳನ್ನು ಉಳಿಸುವ ಪುಣ್ಯ ಕಾರ್ಯದಲ್ಲಿ ಯುವಕರು ಕೈಜೋಡಿಸಿ ಎಂದು ಹೇಳಿದ್ದಾರೆ. ಭಾರತೀಯ ರೆಡ್ ಕ್ರಾಸ್ ಕುಂದಾಪುರ ಸಭಾಪತಿ ಜಯಕರ್ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಒಂದು ಶಿಬಿರಲ್ಲಿ 280 ಯುನಿಟ್ ರಕ್ತ ಸಂಗ್ರಹಿಸುವ ಮೂಲಕ ಇದು ಒಂದು ಮಹತ್ತರದ ಹಾಗೂ ಅರ್ಥ ಪೂರ್ಣ ಶಿಬಿರವಾಗಿದೆ ಎಂದು ಶ್ಲಾಘಿಸಿದ್ದಾರೆ. ಉಡುಪಿ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸತೀಶ್ ಸಾಲ್ಯಾನ್ ಮಣೆಪಾಲ ಪ್ರಾಸ್ತಾವಿಕ ಮಾತುಗಳನ್ನಾಡಿದ್ರು. ಈ ಸಂದರ್ಭದಲ್ಲಿ ರಂಗಭೂಮಿ ಕಲಾವಿದ ಅಶೋಕ್ ದೇವಾಡಿಗ, ಪತ್ರಕರ್ತ ಆರೀಫ್ ಯು.ಆರ್, ಕೆಎಂಸಿ ಆಸ್ಪತ್ರೆಯ ರಕ್ತನಿಧಿ ವಿಭಾಗದ ವಿಶ್ವೇಶ್ ರವರನ್ನು ಸನ್ಮಾನಿಸಲಾಯಿತು.

Leave a Reply

Your email address will not be published. Required fields are marked *

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

ಉಡುಪಿ: ಉಡುಪಿಯಲ್ಲಿ ಅ.23ರಿಂದ ‘ನಡಿಗೆ’ ಸಾಮಾಜಿಕ ಅಭಿಯಾನ; ಬಡ ಮಕ್ಕಳಿಗೆ ಪಾದರಕ್ಷೆ ವಿತರಣೆ

ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ

ಉಡುಪಿ: ಉಡುಪಿಯಲ್ಲಿ ಬಿಸಿಲಿನ ಝಳ ಹೆಚ್ಚಳ; ನದಿಗಳ ನೀರಿನ ಮಟ್ಟ ಕುಸಿತ, ನೀರಿನ ಕೊರತೆಯ ಆತಂಕ..!

ನವದೆಹಲಿ, ಅ.2: ಗಾಂಧಿ ಜಯಂತಿ- ರಾಜಘಾಟ್‌ನಲ್ಲಿ ಗಾಂಧೀಜಿಗೆ ಪ್ರಧಾನಿ ಮೋದಿ ಪುಷ್ಪ ನಮನ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

error: Content is protected !!