ಮಂಗಳೂರಿನ ಕುಲಶೇಖರ ಪದವು ಮೇಗಿನ ಮನೆ ಪರಿಸರದಲ್ಲಿ ನಿರ್ಮಿಸಿದ್ದ ಶ್ರೀ ಶನೈಶ್ಚರ ಮಂದಿರವನ್ನು ದೇವಸ್ಥಾನ ಸ್ವರೂಪದಲ್ಲಿ ಪುನರ್ ನಿರ್ಮಾಣ ಮಾಡುವ ಸಂಕಲ್ಪದೊAದಿಗೆ ದೇವಸ್ಥಾನ ನಿರ್ಮಾಣ ಶಿಲಾನ್ಯಾಸ ನೆರವೇರಿಸಲಾಗಿದೆ. ಶ್ರೀ ದುರ್ಗಾ ದೇವಿ ಹಾಗೂ ಮಹಾಗಣಪತಿ ಗುಡಿ ಸಹಿತ ಶ್ರೀ ಶನಿ ದೇವರ ದೇವಸ್ಥಾನ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ.

ನವೆಂಬರ್ 2025ರಲ್ಲಿ ಪ್ರತಿಷ್ಠೆ ಬ್ರಹ್ಮಕಲಶ ನಡೆಸಲಾಗುವುದು ಎಂದು ಅಧ್ಯಕ್ಷ ಕದ್ರಿ ನವನೀತ್ ಶೆಟ್ಟಿ ಹೇಳಿದ್ದಾರೆ. ಇವರು ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಈಗಾಗಲೇ ಮಂದಿರದ ಸಮೀಪ 8 ಸೆಂಟ್ಸ್ ಸ್ಥಳವನ್ನು ಖರೀದಿ ಮಾಡಲಾಗಿದ್ದು ಇನ್ನೂ ಹೆಚ್ಚುವರಿ 10 ಸೆಂಟ್ಸ್ ಜಮೀನು ಖರೀದಿ ಮಾಡುವ ಯೋಜನೆ ಇದೆ. ಈ ಯೋಜನೆಗೆ ಒಟ್ಟು ಮೂರು ಕೋಟಿ ರೂಪಾಯಿ ವೆಚ್ಚ ತಗುಲಲಿದೆ. ದೇವಸ್ಥಾನದ ನಿರ್ಮಾಣ ಕಾರ್ಯವು ಊರ ಪರವೂರ ಭಕ್ತರ ಸಹಾಯದಿಂದ ಭರದಿಂದ ಸಾಗುತ್ತಿದ್ದು ಮುಂದಿನ ಕೆಲಸ ಕಾರ್ಯಗಳಿಗೆ ಆರ್ಥಿಕ ಕ್ರೋಡಿಕರಣವಾಗಬೇಕಾಗಿದೆ ಎಂದ್ರು. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಗೌರವಾಧ್ಯಕ್ಷ ಮೋನಪ್ಪ ಭಂಡಾರಿ, ಪ್ರಧಾನ ಕಾರ್ಯದರ್ಶಿ ಕಿಶೋರ್ ಕೊಟ್ಟಾರಿ, ಮಾತೃ ಮಂಡಳಿ ಅಧ್ಯಕ್ಷೆ ವಿಜಯ ಅರುಣ್ ಮತ್ತಿತರರು ಉಪಸ್ಥಿತರಿದ್ರು.



