ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭತ್ತದ ಕೃಷಿಯ ಬಗ್ಗೆ ಇನ್ನಷ್ಟು ಜಾಗೃತಿ ಮೂಡಿಸುವ ಮೂಲಕ ಭತ್ತದ ಕೃಷಿಯನ್ನು ಉಳಿಸಿಕೊಳ್ಳಬಹುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನ ಉಪ ಕಾರ್ಯದರ್ಶಿ ಜಯಲಕ್ಷ್ಮೀ ಕೆಎಎಸ್ ತಿಳಿಸಿದ್ದಾರೆ.

ಪುತ್ತಿಗೆ ಗುತ್ತು ಕಡಂದಲೆ ಪರಾರಿ ಮನೆಯ ಭತ್ತದ ಗದ್ದೆಯಲ್ಲಿ ದ.ಕ ಜಿಲ್ಲಾ ವಾರ್ತಾ ಇಲಾಖೆ, ರೋಟರಿ ಕ್ಲಬ್ ಸೆಂಟ್ರಲ್ ಮಂಗಳೂರು, ರೋಟರಿ ಕ್ಲಬ್ ಮಂಗಳೂರು ಕೋಸ್ಟಲ್, ಸ್ಥಳೀಯ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜನೆಗೊಂಡಿತ್ತು. ನೇಜಿ ನೆಡುವ ಪ್ರಾತ್ಯಕ್ಷಿಕೆಯನ್ನುದ್ದೇಶಿಸಿ ಅವರು ಮಾತನಾಡುತ್ತಾ, ದೇಶಕ್ಕೆ ಅನ್ನ ನೀಡುವ ರೈತರಿಗೆ ಅವರ ಕೃಷಿ ಕೆಲಸ ಕಾರ್ಯಗಳ ಬಗ್ಗೆ ಆಸಕ್ತಿ ಹಾಗೂ ಅದಕ್ಕೆ ಹೊಂದಿಕೊAಡೆ ಅವರ ಬದುಕು ಇರುತ್ತದೆ. ಈ ನಿಟ್ಟಿನಲ್ಲಿ ಇಂದಿನ ಪೀಳಿಗೆಯ ಮಕ್ಕಳಲ್ಲಿ ಕೃಷಿಯ ಬಗ್ಗೆ ಆಸಕ್ತಿ ಮೂಡಿಸಲು ಈ ರೀತಿಯ ಪ್ರಾತ್ಯಕ್ಷಿಕೆಯ ಅಗತ್ಯವಿದೆ. ಹಳೆ ಬೇರು, ಹೊಸ ಚಿಗುರು ಕೂಡಿರಲು ಮರ ಸೊಗಸು ಎಂಬ0ತೆ ಕೃಷಿಯ ಬಗ್ಗೆ ಹಿರಿಯ ಮೂಲಕ ಕಿರಿಯರಿಗೆ ಅವರ ಅನುಭವದೊರೆತಾಗ ಕೃಷಿ ಪರಂಪರೆ ಉಳಿಯುತ್ತದೆ ಎಂದಿದ್ದಾರೆ.



