ಜನ ಮನದ ನಾಡಿ ಮಿಡಿತ

Advertisement

ಕೊಣಾಜೆ: ವಿದ್ಯುನ್ಮಾನ ವಾಹನ ಚಾಲನಾ ಪರೀಕ್ಷಾ ಪಥಗಳ ಕೇಂದ್ರ ಉದ್ಘಾಟನೆ

ಕಂಬಳಪದವು ಬಳಿ ನೂತನವಾಗಿ ನಿರ್ಮಾಣಗೊಂಡಿರುವ ವಿದ್ಯುನ್ಮಾನ ವಾಹನ ಚಾಲನಾ ಪರೀಕ್ಷಾ ಪಥಗಳ ಕೇಂದ್ರದ ಉದ್ಘಾಟನ ಸಮಾರಂಭ ನಡೆಯಿತು. ರಾಜ್ಯ ಸಾರಿಗೆ ಮತ್ತು ಮುಜುರಾಯಿ ಸಚಿವ ರಾಮಲಿಂಗ ರೆಡ್ಡಿ ವಿದ್ಯುನ್ಮಾನ ವಾಹನ ಚಾಲನಾ ಪರೀಕ್ಷಾ ಪಥಗಳ ಕೇಂದ್ರವನ್ನು ಲೋಕಾರ್ಪಣೆಗೊಳಿಸಿದ್ರು.

 

ಬಳಿಕ ಮಾತನಾಡಿದ ಇವರು, ಈ ಭಾಗದ ಜನರ ಬೇಡಿಕೆಯಂತೆ ಸುಮಾರು ಏಳುಕೋಟಿ ರೂ ವೆಚ್ಚದಲ್ಲಿ ಈ ವಿದ್ಯುನ್ಮಾನ ವಾಹನ ಚಾಲನಾ ಪರೀಕ್ಷಾ ಪಥಗಳ ಕೇಂದ್ರವನ್ನು ನಿರ್ಮಿಸಲಾಗಿದೆ. ಈಗಾಗಲೇ ದಾರಾವಾಡ, ಕೊಪ್ಪಳ, ದಾಂಡೇಲಿ ಸೇರಿದಂತೆ ಆರು ಕಡೆ ಕಾಮಗಾರಿ ಪೂರ್ಣಗೊಂಡಿದೆ. ಅಲ್ಲದೆ ಬೆಳಗಾವಿ, ರಾಯಚೂರು, ದೇವನಹಳ್ಳಿ, ಕೋಲಾರ, ಹೊಸಪೇಟೆ, ಬಳ್ಳಾರಿ, ವಿಜಯಪುರ, ಇತ್ಯಾದಿ ಜಿಲ್ಲೆಗಳಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಸ್ವಯಂ ಚಾಲಿತ ವಾಹನ ಪರೀಕ್ಷಾ ಕೇಂದ್ರಗಳ ಸ್ಥಾಪನೆಗೆ ಕ್ರಮಕೈಗೊಳ್ಳಲಾಗಿದೆ.

ಕರ್ನಾಟಕ ದೇಶದ ಅತೀ ಹೆಚ್ಚು ಟ್ರ‍್ಯಾಕ್ ಹೊಂದಿದ ರಾಜ್ಯವಾಗಿ ಗುರುತಿಸಿದೆ ಎಂದ್ರು. ದ.ಕ.ಜಿಲ್ಲಾ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮಾತನಾಡಿ, ವಿದ್ಯುನ್ಮಾನ ಟ್ರ‍್ಯಾಕ್ ಉದ್ಘಾಟನೆ ಮೂಲಕ ಬಹಳ ವರ್ಷಗಳ ಬೇಡಿಕೆ ಈಡೇರಿದಂತಾಗಿದೆ. ಸರ್ಕಾರಿ ಸಾರಿಗೆ ವ್ಯವಸ್ಥೆಯ ಅಭಿವೃದ್ಧಿಯ ಬಗ್ಗೆ ಸರ್ಕಾರ ಚಿಂತನೆ ಮಾಡಬೇಕಿದೆ. ಕೇಂದ್ರ ಸರ್ಕಾರದ ಮಹತ್ಚದ ಎಲೆಕ್ಟ್ರಾನಿಕ್ ಬಸ್ ಗಳು ಶೀಘ್ರದಲ್ಲೇ ದ.ಕ.ಜಿಲ್ಲೆಗೆ ಬರಲಿವೆ ಎಂದ್ರು. ಇದೇ ವೇಳೆ ಕಾರ್ಯಕ್ರಮದಲ್ಲಿ ವಿಧಾನಸಭಾ ಅಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಮಾತಾನಾಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

error: Content is protected !!