ಪಡುಪಣಂಬೂರು ಪೆಟ್ರೋಲ್ ಪಂಪ್‌ನಲ್ಲಿ ಪೆಟ್ರೋಲ್‌ಗೆ ನೀರು ಮಿಕ್ಸ್ ಮಾಡಿ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಈ ಬಗ್ಗೆ ಸವಾರರೊಬ್ಬರು ವಿಡಿಯೋ ಮಾಡಿದ್ದು, ಬೆಳಗ್ಗೆ 200 ರೂಪಾಯಿ ಪೆಟ್ರೋಲ್ ಹಾಕಿಸಿ ಸ್ವಲ್ಪ ದೂರ ಹೋಗುವಾಗಲೇ ಗಾಡಿ ನಿಂತಿದೆ. ಬಳಿಕ ನೋಡಿದಾಗ ಪೆಟ್ರೋಲ್ ಸಮಸ್ಯೆ ಕಂಡುಬ0ದಿದೆ. 200 ರೂಪಾಯಿ ಪೆಟ್ರೋಲಿನಲ್ಲಿ ಅರ್ಧದಷ್ಟು ನೀರು ತುಂಬಿಸಿದ್ದಾರೆ ಎಂದು ಆರೋಪಿಸಿದ್ರು. ಬಾಟಲಿಯಲ್ಲಿ ಪೆಟ್ರೋಲ್ ತುಂಬಿಸಿ, ಯಾರು ಪಡುಪಣಂಬೂರು ಪೆಟ್ರೋಲ್ ಬಂಕ್‌ಗೆ ಬಂದು ಪೆಟ್ರೋಲ್ ಹಾಕಿಸಬೇಡಿ ಎಂದು ವಿಡಿಯೋದಲ್ಲಿ ವಿನಂತಿಸಿಕೊ0ಡಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗ್ತಾಯಿದೆ. ಇನ್ನು ಈ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಷ್ಟೆ.



