ಜನ ಮನದ ನಾಡಿ ಮಿಡಿತ

Advertisement

ಉಡುಪಿ: 15 ಗಂಟೆಯಲ್ಲೇ ಪೋಕ್ಸೊ ವಿಶೇಷ ಪಿಪಿ ವಿರುದ್ಧದ ಪ್ರಕರಣಕ್ಕೆ ತಡೆಯಾಜ್ಞೆ..!

ಜಿಲ್ಲೆಯ ಪೋಕ್ಸೊ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈಟಿ.ರಾಘವೇಂದ್ರ ಸೇರಿದಂತೆ ಮನೋಜ್ ಹಾಗು ಸಂಜಯ್ ವಿರುದ್ದ ಮಹಿಳಾ ಠಾಣೆಯಲ್ಲಿ ದಾಖಲಾಗಿದ್ದ ಜಾತಿನಿಂದನೆ ಪ್ರಕರಣಕ್ಕೆ 15 ಗಂಟೆಯ ಅವಧಿಯಲ್ಲೇ ಕರ್ನಾಟಕ ಹೈಕೋರ್ಟ್ ಬುಧವಾರ ತಡೆಯಾಜ್ಞೆ ನೀಡಿ ಆದೇಶಿಸಿದೆ.

ಉಡುಪಿ ಮಹಿಳಾ ಠಾಣೆಯಲ್ಲಿ ಜು.15 ರಂದು ದಾಖಲಾಗಿದ್ದ ಜಾತಿನಿಂದನೆ ಪ್ರಕರಣವನ್ನು ಪ್ರಶ್ನಿಸಿ ವೈ.ಟಿ ರಾಘವೇಂದ್ರ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ತುರ್ತು ವಿಚಾರಣೆ ನಡೆಸಿದ್ದ ನ್ಯಾ. ಎಸ್.ಆರ್ ಕೃಷ್ಣಕುಮಾರ್ ಅವರಿದ್ದ ಪೀಠವು, ತಾತ್ಕಾಲಿಕ ತಡೆಯಾಜ್ಞೆ ನೀಡಿ ಆದೇಶಿಸಿದ್ದಾರೆ. ವೈ.ಟಿ ರಾಘವೇಂದ್ರ ಅವರ ಪರವಾಗಿ ಹಿರಿಯ ನ್ಯಾಯವಾದಿ ಪಿಪಿ ಹೆಗ್ಡೆ ವಾದಿಸಿದ್ದಾರೆ. ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಪೋಕ್ಸೊ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ ರಾಘವೇಂದ್ರ, ನಾನು ತಲೆಮರೆಸಿಕೊಂಡಿಲ್ಲ. ನನ್ನ ಕಚೇರಿಯಲ್ಲಿಯೇ ಇದ್ದೇನೆ. ಬಿಎನ್‌ಎಸ್ ಕಾಯ್ದೆ ಪ್ರಕಾರ 14 ದಿನಗಳ ಪ್ರಾಥಮಿಕ ತನಿಖೆಯನ್ನು ನಡೆಸಿ, ಪ್ರಕರಣ ದಾಖಲಿಸಬೇಕಿತ್ತು. ಪೋಲಿಸರು ಒತ್ತಡಕ್ಕೆ ಮಣಿದು ಏಕಾಏಕಿ ಪ್ರಕರಣ ದಾಖಲಿಸಿರುವುದು ಸಮಂಜಸವಲ್ಲ. ಅಲ್ಲದೇ ನನ್ನ ಕಚೇರಿಯಲ್ಲಿ ಕೆಲಸವನ್ನು ಬಿಟ್ಟು 8 ವರ್ಷದ ಬಳಿಕ, ಅಂದು ಜಾತಿ ನಿಂದನೆ ಮಾಡಿದ್ದೇನೆ ಎಂದು ದೂರು ನೀಡಿದ್ದಾರೆ. ಇದೊಂದು ಸುಳ್ಳು ಪ್ರಕರಣ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!