ಜನ ಮನದ ನಾಡಿ ಮಿಡಿತ

Advertisement

ಉಳ್ಳಾಲ: ಹೂಳೆತ್ತುವ ವೇಳೆ ನೀರುಪಾಲಾಗಿದ್ದ ಕೇಶವ; ಪತ್ತೆ..!

ಭಾರೀ ಮಳೆ ಹಿನ್ನೆಲೆ ಹೊಳೆ ದಾಟುವ ಸಂದರ್ಭ ಕಾಲುಸಂಕದಿಂದ ನೀರಿಗೆ ಬಿದ್ದು ನಾಪತ್ತೆಯಾಗಿದ್ದ ಕೂಲಿಕಾರ್ಮಿಕರ ಮೃತದೇಹ ಸೋಮೇಶ್ವರ ಉಚ್ಚಿಲದ ಹೊಳೆಯಲ್ಲಿ ಪತ್ತೆಯಾಗಿದೆ.

ನಿರಂತರ ಸುರಿಯುತ್ತಿದ್ದ ಧಾರಾಕಾರ ಮಳೆಗೆ ಕೆಲಸ ಬಿಟ್ಟು ಮನೆಯ ಕಡೆಗೆ ತೆರಳುತ್ತಿದ್ದ ಕೂಲಿ ಕಾರ್ಮಿಕರೋರ್ವರು ಕಾಲುಸಂಕದ ಮುಖೇನ ಕಾಲುವೆ ದಾಟುತ್ತಿದ್ದ ವೇಳೆ ನೀರು ಪಾಲಾಗಿ ನಾಪತ್ತೆಯಾಗಿದ್ರು. ಅವರ ಮೃತ ದೇಹವು ಪತ್ತೆಯಾಗಿದ್ದು, ಅವರನ್ನು ಸೋಮೇಶ್ವರ ಗ್ರಾಮದ ಕುಂಪಲ ಆಶ್ರಯ ಕಾಲೊನಿಯ ನಿವಾಸಿ 64ವರ್ಷದ ಕೇಶವ ಶೆಟ್ಟಿ ಎಂದು ಗುರುತಿಸಲಾಗಿದೆ. ಜುಲೈ 18ರಂದು ಏಳು ಗಂಟೆ ವೇಳೆಗೆ ಕೇಶವ ಅವರು ಎಡೆ ಬಿಡದೆ ಸುರಿಯುತ್ತಿದ್ದ ಮಳೆಯಲ್ಲಿ ಪಿಲಾರು ರಸ್ತೆಯಾಗಿ ಮನೆ ಕಡೆ ತೆರಳುತ್ತಿದ್ದರೆನ್ನಲಾಗಿದೆ.ಈ ವೇಳೆ ಉಕ್ಕಿ ಹರಿಯುತ್ತಿದ್ದ ಪಿಲಾರುವಿನ ರಾಜಕಾಲುವೆಯ ಕಾಲುಸಂಕ ದಾಟುತ್ತಿದ್ದ ವೇಳೆ ಕೇಶವ ಅವರು ನೀರುಪಾಲಾಗಿದ್ರು. ಮನೆ ಮಂದಿ ,ನೆರೆಹೊರೆಯವರು ಸೇರಿ ಕಾಲುವೆಯುದ್ದಕ್ಕೂ ಸಾಕಷ್ಟು ಹುಡುಕಾಟ ನಡೆಸಿದ್ದರೂ ಕೇಶವ ಅವರು ಸಿಕ್ಕಿರಲಿಲ್ಲ. ಕೇಶವ ಅವರ ಛತ್ರಿಯು ಕಾಲುವೆಯಲ್ಲಿ ಪತ್ತೆಯಾಗಿತ್ತು. ಮೃತ ಕೇಶವ ಅವರು ಪತ್ನಿ ಹಾಗೂ ಪುತ್ರ, ಪುತ್ರಿಯನ್ನ ಅಗಲಿದ್ದಾರೆ

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!