ತುಳುಕೂಟ ಉಡುಪಿ ಇದರ ಆಶ್ರಯದಲ್ಲಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ “ಆಟಿದ ತಿರ್ಲ್-2025” ಎಂಬ ವಿನೂತನ ಕಾರ್ಯಕ್ರಮವನ್ನು ಉಡುಪಿ ಬಡಗುಬೆಟ್ಟು ಸೊಸೈಟಿಯ ಜಗನ್ನಾಥ ಸಭಾಭವನದಲ್ಲಿ ಇಂದು ನಡೆದಿದೆ.

ಅಧ್ಯಕ್ಷತೆ ವಹಿಸಿದ್ದ ಬಿ. ಜಯಕರ ಶೆಟ್ಟಿ ಇಂದ್ರಾಳಿ ಮಾತನಾಡಿ, ತುಳುನಾಡಿನ ಆಚಾರ- ವಿಚಾರ, ಸಂಸ್ಕೃತಿ, ಸಂಪ್ರದಾಯಗಳನ್ನು ಇಂದಿನ ಯುವಪೀಳಿಗೆಗೆ ತಿಳಿಸುವ ಕೆಲಸ ಆಗಬೇಕು. ಈ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವುದು ಬಹಳ ಅಗತ್ಯ ಎಂದ್ರು. ಈ ಸಂದರ್ಭದಲ್ಲಿ ನಾಟಿ ವೈದ್ಯೆ ಕಮಲ ಮಡಿವಾಳ ಅವರನ್ನು ಸಮ್ಮಾನಿಸಲಾಯಿತು. ಇನ್ನು ಈ ಕಾರ್ಯಕ್ರಮದಲ್ಲಿ ತುಳುಕೂಟದ ಕಾರ್ಯದರ್ಶಿ ಗಂಗಾಧರ ಕಿದಿಯೂರು, ಆಟಿದ ತಿರ್ಲ್ ಸಂಚಾಲಕರಾದ ತಾರಾ ಸತೀಶ್, ಪೂರ್ಣಿಮಾ ಶೆಟ್ಟಿ, ತೆಂಕನಿಡಿಯೂರು ಕಾಲೇಜಿನ ವಿದ್ಯಾರ್ಥಿನಿ ಶರಣ್ಯ, ಶಿರ್ವ ಎಂಎಸ್ ಆರ್ ಎಸ್ ಕಾಲೇಜಿನ ವಿದ್ಯಾರ್ಥಿಗಳಾದ ಶ್ರೇಯಸ್ ಮತ್ತು ಅನೀಶಾ ಭಂಡಾರಿ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.



