ಜನ ಮನದ ನಾಡಿ ಮಿಡಿತ

Advertisement

ಪಾನೀರ್: ಕಥೊಲಿಕ್ ಸಭಾದಿಂದ ಪ್ರತಿಭಾ ಪುರಸ್ಕಾರ-2025′ ಕಾರ್ಯಕ್ರಮ

ಉಳ್ಳಾಲದ ಪಾನೀರ್ ಮೆರ್ಸಿಯಮ್ಮ ಇಗರ್ಜಿ ವತಿಯಿಂದ ಕಥೊಲಿಕ್ ಸಭಾ ಪಾನೀರ್ ಘಟಕದ ಆಶ್ರಯದಲ್ಲಿ ಪ್ರತಿಭಾ ಪುರಸ್ಕಾರ-2025′ ಕಾರ್ಯಕ್ರಮ ಚರ್ಚ್ ಸಭಾಂಗಣದಲ್ಲಿ ನಡೆಯಿತು.

ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜ ಪ್ರತಿಭಾ ಪುರಸ್ಕಾರ-2025′ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಪ್ರತಿಭೆ ಇದ್ದವರೆಗೆ ಸರ್ಕಾರಿ ಮಟ್ಟದಲ್ಲಿ ಸಾಕಷ್ಟು ಅವಕಾಶ ಇದ್ದು ಪ್ರಯತ್ನಿಸಿದರೆ ಸುಲಭವಾಗಿ ಕೆಲಸ ಪಡೆಯಲು ಸಾಧ್ಯ. ಆದರೆ ಸಮುದಾಯದ ಯುವಕರು ಶೈಕ್ಷಣಿಕವಾಗಿ ಸಾಕಷ್ಟು ಅಭಿವೃದ್ಧಿ ಹೊಂದಿದರೂ ಸರ್ಕಾರಿ ಕೆಲಸ ಪಡೆಯುವಲ್ಲಿ, ಸರ್ಕಾರಿ ಕೆಲಸ ಮಾಡಿಸುವಲ್ಲಿ ತೀರಾ ಹಿಂದುಳಿದ ಕಾರಣ ಖಾಸಗಿ ಕಂಪನಿ ಅಥವಾ ವಿದೇಶದಲ್ಲಿ ಕೆಲಸ ಅವಲಂಭಿಸುವಂತಾಗಿದೆ ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭ ಎಸ್ಸೆಸ್ಸೆಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಉನ್ನತ ಶಿಕ್ಷಣ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಅಧ್ಯಕ್ಷತೆ ವಹಿಸಿದ್ದ ಪಾನೀರ್ ಮೆರ್ಸಿಯಮ್ಮ ಇಗರ್ಜಿಯ ಧರ್ಮಗುರು ಫಾ.ವಿಕ್ಟರ್ ಡಿಮೆಲ್ಲೋ ಮಾತನಾಡಿ, ಸಮುದಾಯದ ಯುವಕರು ಸೇವೆಯಲ್ಲಿ ಮುಂದಿದ್ದರೂ ನಮ್ಮ ಹಕ್ಕು ಪಡೆಯುವಲ್ಲಿ ಹಿಂದಿದ್ದೇವೆ, ಸರ್ಕಾರಿ ಕೆಲಸ ಪಡೆಯಲು ಕಷ್ಟಪಡಬೇಕು. ಆದರೆ ಒಂದು ಬಾರಿ ಪಡೆದರೆ ನಿವೃತ್ತಿ ಬಳಿಕವೂ ಪ್ರಯೋಜನ ಸಿಗುತ್ತದೆ ಎಂದರು. ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷೆ ಸರಿಟಾ ಡಿಸೋಜ, ಚರ್ಚ್ ಪಾಲನಾ ಮಂಡಳಿ ಕಾರ್ಯದರ್ಶಿ ಗ್ರೆಟ್ಟಾ ಡಿಕುನ್ಹಾ, ದಯಾಮಾತೆ ಚರ್ಚ್ ಮಾಜಿ ಉಪಾಧ್ಯಕ್ಷ ಫ್ರಾಂಕಿ ಫ್ರಾನ್ಸಿಸ್ ಕುಟಿನ್ಹ, ಕಾರ್ಯಕ್ರಮ ಸಂಯೋಜಕ ಇಯಾನ್ ಮೊಂತೆರೋ ಮೊದಲಾದವರು ಉಪಸ್ಥಿತರಿದ್ದರು. ಐವನ್ ಮೊಂತೆರೋ ಸ್ವಾಗತಿಸಿದರು. ರುವಿತಾ ಮೆನೇಜಸ್ ವಿದ್ಯಾರ್ಥಿಗಳ ಹೆಸರು ವಾಚಿಸಿದರು. ವೈಲೆಟ್ ಡಿಸೋಜ ವಂದಿಸಿದರು. ಅಶ್ವಿನ್ ಮೊಂತೆರೋ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

error: Content is protected !!