ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ ಗ್ರಾ. ಪೋಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಒಬ್ಬರು ಬಾಡಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ..!

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಒಬ್ಬರು ಬಾಡಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

 


ಉತ್ತರಕನ್ನಡ ನಿವಾಸಿ ಕೀರಪ್ಪ (54) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ.ಅವರು ಶಿರಸಿ ಠಾಣೆಯಿಂದ ಕಳೆದ 5 ತಿಂಗಳ ಹಿಂದೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದರು. ಇವರ ಕುಟುಂಬ ಸದಸ್ಯರು ಉತ್ತರ ಕನ್ನಡದಲ್ಲೇ ಇದ್ದು,ಇವರು ಒಬ್ಬರೇ ಇಲ್ಲಿ ಇದ್ದರು. ಬಂಟ್ವಾಳ ಪೇಟೆಯಲ್ಲಿರುವ ಚಿನ್ನದ ಉದ್ಯಮಿಯೋರ್ವರಿಗೆ ಸೇರಿದ ಮನೆಯಲ್ಲಿ ಬಾಡಿಗೆಗೆ ವಾಸವಾಗಿದ್ದರು.

ಬೆಳಿಗ್ಗೆಯಿಂದ ಕರ್ತವ್ಯ ಕ್ಕೆ ಹಾಜರಾಗದೆ ಇದ್ದ ಸಬ್ ಇನ್ಸ್ ಪೆಕ್ಟರ್ ಅವರು ಪೋನ್ ಕಾಲ್ ಕೂಡ ರಿಸೀವ್ ಮಾಡದೆ ಇದ್ದ ಕಾರಣದಿಂದ ಸಂಶಯಗೊಂಡ ಪೋಲೀಸರು ಇಂದು ಸಂಜೆ ವೇಳೆ ಅವರು ವಾಸಿಸುವ ಬಾಡಿಗೆ ಮನೆಗೆ ಹೋಗಿ‌ ನೋಡಿದಾಗ ಬೀಗ. ಹಾಕಿದ ಸ್ಥಿತಿಯಲ್ಲಿ ಇತ್ತು ಕರೆದಾಗ ಯಾವುದೇ ಸ್ಪಂದನೆ ನೀಡದೆ ಇದ್ದಾಗ , ಕಿಟಕಿಯಲ್ಲಿ ನೋಡಿದಾಗ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಕಂಡು ಬಂದಿದ್ದಾರೆ.ಆತ್ಮಹತ್ಯೆಗೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ.ಸ್ಥಳಕ್ಕೆ ಆಡಿಸನಲ್ ಎಸ್.ಪಿ. ಬೇಟಿ ನೀಡಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!