ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಗುಡ್ಡ ಕುಸಿತ; ಬಂಟ್ವಾಳದಿಂದ ಹಿಮಾಚಲಕ್ಕೆ ಹೊರಟ 47ಮಂದಿ ಸೇಫ್..!

ಹಿಮಾಚಲದ ಪ್ರದೇಶದಲ್ಲಿ ಗುಡ್ಡ ಕುಸಿತದ ಪರಿಣಾಮ ಬಂಟ್ವಾಳದಿಂದ ತೀರ್ಥಕ್ಷೇತ್ರಗಳ ಸಂದರ್ಶನಕ್ಕೆ ತೆರಳಿರುವ ಸುಮಾರು 47 ಮಂದಿ ಪ್ರಯಾಣಿಕರು ಹೆದ್ದಾರಿ ಬ್ಲಾಕ್‌ನಲ್ಲಿ ಸಿಲುಕಿ ಹಾಕಿಕೊಂಡಿದ್ದು, ಎಲ್ಲರು ಸುರಕ್ಷಿತವಾಗಿ ಇದ್ದಾರೆ ಎಂದು ತಿಳಿದು ಬಂದಿದೆ.

ಹಿಮಾಚಲ ಪ್ರದೇಶದ ಶಿಮ್ಲಾ ಮನಾಲಿ ಹೆದ್ದಾರಿಯಲ್ಲಿ ದೊಡ್ಡ ಮಟ್ಟದ ಭೂ ಕುಸಿತ ಉಂಟಾಗಿದ್ದು, ಒಂದಷ್ಟು ವಾಹನಗಳು ಮಣ್ಣಿನಡಿಗೆ ಸಿಲುಕಿದೆ ಎನ್ನಲಾಗಿದೆ. ಆದರೆ ಬಂಟ್ವಾಳದ ಪ್ರಯಾಣಿಕರಿದ್ದ ಮೂರು ವಾಹನಗಳು ಕುಸಿತದ ಸ್ಥಳಕ್ಕಿಂತ ಬಹಳ ದೂರದಲ್ಲಿ ಇರುವ ಹಿನ್ನೆಲೆ ಯಾವುದೇ ಅಪಾಯವಗಿಲ್ಲ.

ಸುಮಾರು 3 ಕಿ.ಮೀ. ವರೆಗೆವಾಹನಗಳ ಸಾಲು ನಿಂತಿದ್ದು, ಮಣ್ಣು ತೆರವು ಕಾರ್ಯ ಭರದಿಂದ ಸಾಗುತ್ತಿದೆ ಎಂದು ಪ್ರವಾಸಿಗರು ತಿಳಿಸಿದ್ದಾರೆ. ಹೆದ್ದಾರಿಯಲ್ಲಿ ಸಾಕಷ್ಟು ಅಂಗಡಿ ಮುಂಗಟ್ಟುಗಳು ಇರುವುದರಿಂದ ಎಷ್ಟು ಹೊತ್ತು ಬ್ಲಾಕ್ ಇದ್ದರೂ ಊಟ, ತಿಂಡಿಗೆ ಯಾವುದೇ ಸಮಸ್ಯೆಯಿಲ್ಲ ಎಂದು ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!