ಈಗಾಗಲೇ ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ನಿರಂತರ ಸುರಿಯುವ ಮಳೆಯಿಂದ ಹಲವೆಡೆ ಹಾಣಿಯಾಗಿರುವುದರ ಬಗ್ಗೆ ವರದಿಯಾಗಿದೆ.

ಇದೀಗ ಹವಾಮಾನ ಇಲಾಖೆ ಮಳೆ ಮುಂದುವರಿದಿರುವ ಬಗ್ಗೆ ಮುನ್ಸೂಚನೆ ಕೂಡ ನೀಡಿದೆ. ಜುಲೈ 27ರ ವರೆಗೆ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಗುವ ಸಾದ್ಯತೆ ಇದ್ದು ಹವಾಮನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಇನ್ನು ಕರಾವಳಿಯಲ್ಲಿ ಮಳೆ ಮುಂದುವರಿದ ಕಾರಣ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಕಡಲು ಪ್ರಕ್ಷುಬ್ಧಗೊಂಡಿದ್ದು, ಸಮುದ್ರದಲ್ಲಿ ಗಂಟೆಗೆ 50 ಕಿ ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ, ನದಿ ತೀರದ ಮತ್ತು ತಗ್ಗು ಪ್ರದೇಶದ ಜನರು ಎಚ್ಚರ ವಹಿಸುವಂತೆ ಸೂಚನೆ ನೀಡಲಾಗಿದೆ.



