ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಮಂಜೇಶ್ವರದ ಯತಿರಾಜ್ (34) ಬಂಧಿತ ಆರೋಪಿ.

ಬಂಧಿತ ಆರೋಪಿಯು 2022ರಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಆರೋಪಿಗೆ 7 ಬಾರಿ ನ್ಯಾಯಾಲಯ ವಾರೆಂಟ್ ಜಾರಿ ಮಾಡಿತ್ತು. ಇನ್ನು ನ್ಯಾಯಾಲಯದ ಆದೇಶ ಉಲ್ಲಂಘಿಸಿ ವಿಚಾರಣೆಗೆ ಹಾಜರಾಗದಿರುವ ಹಿನ್ನೆಲೆ ಆರೋಪಿಯ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕಲಂ 269 ಬಿಎನ್‌ಎಸ್ 2023ರಂತೆ ಪ್ರಕರಣ ದಾಖಲಾಗಿದೆ. ಆರೋಪಿಯು ಪುತ್ತೂರು ನಗರ, ಬಂಟ್ವಾಳ ನಗರ, ವೇಣೂರು ಪೊಲೀಸ್ ಠಾಣೆಗಳಲ್ಲಿ ವಾಹನ ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದಾನೆ. ಆರೋಪಿಯ ವಿರುದ್ಧ ಕೊಣಾಜೆ, ಕಾವೂರು, ವಿಟ್ಲ ಠಾಣೆಗಳಲ್ಲಿ ಒಟ್ಟು ಸುಮಾರು 7 ಪ್ರಕರಣಗಳು ದಾಖಲಾಗಿರುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.



