ಕೊಯನಾಡು ಸಮೀಪ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಕೂಡ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಅಪಘಾತಕ್ಕೊಳಗಾದ ಕಾರು ಕೊಡಗು ಜಿಲ್ಲೆ ಗೋಣಿಕೊಪ್ಪ ಮೂಲದು ಎಂದು ತಿಳಿದು ಬಂದಿದ್ದು, ಮೃತರನ್ನು ನಿಹಾದ್, ರಿಷಾನ್, ಮತ್ತು ರಾಶಿಬ್ ಎಂದು ಗುರುತಿಸಿಲಾಗಿದೆ. ಮತ್ತೋರ್ವ ಮೃತ ಯುವಕನ ಹೆಸರು ಇನ್ನಷ್ಟೇ ತಿಳಿಯಬೇಕಾಗಿದೆ. ಮಂಗಳೂರು ಕಡೆಯಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಲಾರಿಗೆ ಮಡಿಕೇರಿಯಿಂದ ಬರುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಸ್ಥಳದಲ್ಲಿ ಸುಳ್ಳದ ಆಂಬುಲೆನ್ಸ್ ಚಾಲಕರು ಸೇರಿದ್ದು ಮೃತರ ಮನೆಯವರನ್ನು ಸಂಪರ್ಕಿಸುವ ಪ್ರಯತ್ನ ಮಾಡಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಾಗಿದೆ.



