ಜನ ಮನದ ನಾಡಿ ಮಿಡಿತ

Advertisement

ಕೊಳತ್ತಮಜಲಿನ ಅಬ್ದುಲ್ ರಹಿಮಾನ್ ಹತ್ಯೆ ಕೇಸ್‌ಗೆ ಸಂಭಂದಿಸಿದಂತೆ 12ನೇ ಆರೋಪಿಯ ಬಂಧನ

ಬಂಟ್ವಾಳ, ಜು. 26; ತಾಲೂಕಿನ ಕೂರಿಯಾಳ ಗ್ರಾಮದ ಇರಾಕೋಡಿಯಲ್ಲಿ ಮೇ 27ರಂದು ನಡೆದ ಕೊಳತ್ತಮಜಲಿನ ಅಬ್ದುಲ್ ರಹಿಮಾನ್ ಹತ್ಯೆ ಹಾಗೂ ಖಲಂಧರ್ ಶಾಫಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಭಂದಿಸಿದಂತೆ ಪೊಲೀಸರು 12ನೇ ಆರೋಪಿಯನ್ನು ಜು. 25ರಂದು ಬಂಧಿಸಿದ್ದಾರೆ.

ಪುದು ಗ್ರಾಮದ ರೊಟಿ ಗುಡ್ಡೆ ನಿವಾಸಿ ಸಚಿನ್ ಯಾನೆ ಸಚ್ಚು ರೊಟ್ಟಿಗುಡ್ಡೆ ಬಂಧಿತ ಆರೋಪಿಯಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಳಿಕ ಹೆಚ್ಚಿನ ವಿಚಾರಣೆ ನಡೆಸಲು ನ್ಯಾಯಾಲಯ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ನೀಡಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಈ ಹಿಂದೆ ಬಂಟ್ವಾಳ ಗ್ರಾಮಾಂತರ ಪೊಲೀಸರು 10 ಮಂದಿ ಆರೋಪಿಯನ್ನು ಬಂಧಿಸಿದ್ದರು. ಜು. 21ರಂದು 11ನೇ ಆರೋಪಿ ಅಮ್ಮುಂಜೆ ಗ್ರಾಮದ ಶಾಹಿತ್ ಯಾನೆ ಸಾಹಿತ್‌ನನ್ನು ಬಂಧಿಸಿ ಕಸ್ಟಡಿಗೆ ಪಡೆದಿದ್ದರು. ಪ್ರಾರಂಭದಲ್ಲಿ ಬಂಧಿತ ಬಹುತೇಕ ಎಲ್ಲಾ ಆರೋಪಿಗಳನ್ನು ಪೊಲೀಸರು ಕೆಲ ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದು, ಪ್ರಸ್ತುತ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಪಾಜೆರೋ ಕಾರು ಪ*ಲ್ಟಿ ; ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು….!

ಬ್ರಹ್ಮಾವರ: ತಲೆಯ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಸಾವು..!

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

error: Content is protected !!