ಜನ ಮನದ ನಾಡಿ ಮಿಡಿತ

Advertisement

ಕಾರ್ಕಳ: ಅರಣ್ಯ ಇಲಾಖೆ ವಾಚ್‌ಮ್ಯಾನ್ ವಿಷ ಸೇವಿಸಿ ಆತ್ಮಹ*ತ್ಯೆ

ಕೆಲವು ತಿಂಗಳಿನಿ0ದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಅರಣ್ಯ ಇಲಾಖೆಯ ತಾತ್ಕಾಲಿಕ ವಾಚ್‌ಮ್ಯಾನ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿ ಕೊಂಡ ಘಟನೆ ಕಾರ್ಕಳದಲ್ಲಿ ನಡೆದಿದೆ.

ವೇದವ್ಯಾಸ ಎಂಬವರು ಮೃತ ಪಟ್ಟವರಾಗಿದ್ದಾರೆ. ಕಾರ್ಕಳ ಕಸಬಾ ಗ್ರಾಮದ ಅನಂತ ಶಯನ ಎಂಬಲ್ಲಿ ತಮ್ಮ ಸೋದರಳಿಯ ಸುಮಂತ್ ಅವರ ಜತೆ ವಾಸವಾಗಿದ್ದರು. 12 ವರ್ಷಗಳಿಂದ ಅರಣ್ಯ ಇಲಾಖೆ ಯಲ್ಲಿ ತಾತ್ಕಾಲಿಕ ವಾಚ್‌ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸಿದ್ದರು. ವೇದವ್ಯಾಸ ಅವರಿಗೆ ಕಳೆದ ವರ್ಷ ನವೆಂಬರ್‌ನಲ್ಲಿ ಕ್ಯಾನ್ಸರ್ ಕಾಯಿಲೆ ಇರುವುದು ಪತ್ತೆ ಯಾಗಿತ್ತು. ಅಂದಿನಿ0ದ ಮನೆಯಲ್ಲೇ ಉಳಿದುಕೊಂಡಿದ್ದ ಅವರು, ಕಾಯಿಲೆಯಿಂದ ತೀವ್ರ ಮನನೊಂದಿದ್ದರು. ಮಾ. 3ರಂದು ಮನೆಯಲ್ಲಿ ಯಾವುದೋ ವಿಷಕಾರಿ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದ ಅವರನ್ನು ತತ್‌ಕ್ಷಣ ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ ಯಾಗದೆ ಮೃತಪಟ್ಟಿದ್ದಾರೆ. ಇನ್ನು ಈ ಬಗ್ಗೆ ಕಾರ್ಕಳ ನಗರ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!