ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ದಾಟಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ ೭೫ ರ ಮಾಣಿ ಸಮೀಪದ ಬೊಲ್ಲುಕಲ್ಲು ಎಂಬಲ್ಲಿ ನಡೆದಿದೆ.

ಉಪ್ಪಿನಂಗಡಿಯಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿರುವ ಕಾರು ಪಲ್ಟಿಯಾಗಿದೆ. ಕಾರಿನಲ್ಲಿ ಮಗು ಸಹಿತ ನಾಲ್ವರು ಪ್ರಯಾಣಿಕರಿದ್ದರು ಎಂದು ಹೇಳಲಾಗಿದ್ದು, ಅದೃಷ್ಟವಶಾತ್ ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆಯಾದರೂ ಯಾವುದೇ ಅಪಾಯವಾಗಿಲ್ಲ ಎಂದು ತಿಳಿಸಿದ್ದಾರೆ.

ರಸ್ತೆಯಲ್ಲಿ ನೀರುನಿಂತಿದ್ದು, ಇದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ, ಇದೇ ರೀತಿ ಇಲ್ಲಿ ಅನೇಕ ಅಪಘಾತಗಳು ನಡೆದಿದ್ದು, .ರಾಷ್ಟ್ರೀಯ ಹೆದ್ದಾರಿ ಯ ಅಲ್ಲಲ್ಲಿ ಇದೇ ರೀತಿ ನೀರು ತುಂಬಿದ ಪರಿಣಾಮ ಚಾಲಕನ ನಿಯಂತ್ರಣ ಕಳೆದುಕೊಂಡು ಅಪಘಾತಗಳು ನಡೆಯುತ್ತಿದೆ. ಕಾಂಕ್ರೀಟ್ ರಸ್ತೆಯಲ್ಲಿ ತುಂಬಿದ ನೀರು ಸರಿಯಾಗಿ ಹರದು ಹೋಗಲು ವ್ಯವಸ್ಥೆ ಮಾಡಬೇಕು ಎಂಬ ಒತ್ತಾಯಗಳು ಕೇಳಿ ಬಂದಿವೆ



