ಜನ ಮನದ ನಾಡಿ ಮಿಡಿತ

Advertisement

ಚಿಕ್ಕಪ್ಪನ ಕ್ರೂರತ್ವದ ದಾಳಿಗೆ ಇಬ್ಬರು ಗಂಡು ಮಕ್ಕಳ ಸಾವು: ಒರ್ವನ ಸ್ಥಿತಿ ಗಂಭೀರ

ಬೆಂಗಳೂರು: ತನ್ನ ಅಣ್ಣನ ಮೂವರು ಮಕ್ಕಳ ಮೇಲೆ ಕ್ರೂರವಾಗಿ ದಾಳಿ ಮಾಡಿದ ತಮ್ಮ ಇಬ್ಬರ ಜೀವ ಬಲಿ ಪಡೆದಿದ್ದಾನೆ. ಇನ್ನೊಬ್ಬ ಬಾಲಕ ಸಾವು ಬದುಕಿನ ನಡುವೆ ಹೋರಾಡುತ್ತಿದೆ. ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕಮ್ಮಸಂದ್ರದಲ್ಲಿ ಈ ಘಟನೆ ನಡೆದಿದೆ.


ಕಮ್ಮಸಂದ್ರದದ ಚಾಂದ್ ಪಾಷಾ ಅವರ ಮಕ್ಕಳಾದ ಮಹಮ್ಮದ್ ಇಶಾಕ್ (9) ಮಹಮ್ಮದ್ ಜುನೇದ್ (7) ಜೀವ ಸ್ಥಳದಲ್ಲೇ ಹೋಗಿದೆ. ಇನ್ನೊಬ್ಬ ಬಾಲಕ ಮಹಮದ್ ರೋಷನ್‌ (5) ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದಾನೆ. ಈ ಮಕ್ಕಳ ಚಿಕ್ಕಪ್ಪನಾದ ಖಾಸೀಂ (35) ಜೀವ ತೆಗೆದ ಆರೋಪಿ. ಖಾಸೀಂ ಮೂವರು ಮಕ್ಕಳ ಮೇಲೆ ಮನಬಂದಂತೆ ದಾಳಿ ಮಾಡಿದ್ದಾನೆ. ಇದರಿಂದ ಸ್ಥಳದಲ್ಲೇ ಇಬ್ಬರು ಮಕ್ಕಳು ಉಸಿರು ಚೆಲ್ಲಿದ್ದಾರೆ. ಇನ್ನೊಂದು ಮಗು ತೀವ್ರವಾಗಿ ಗಾಯಗೊಂಡಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ. ಮಗುವಿನ ಸ್ಥಿತಿ ಚಿಂತಾಜನಕವಾಗಿದೆ.

ಹೆಬ್ಬಗೋಡಿ ‌ಪೊಲೀಸರು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿ ಖಾಸೀಂನನ್ನ ವಶಕ್ಕೆ ಪಡೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!