ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಬಿಜೈನಲ್ಲಿ ಶೂಟೌಟ್ ಪ್ರಕರಣ ; ರವಿ ಪೂಜಾರಿ ಸಹಚರ ಅರೆಸ್ಟ್

ಬಿಜೈನಲ್ಲಿರುವ ಭಾರತಿ ಬಿಲ್ಡರ್ಸ್ ಕಛೇರಿ ಮೇಲೆ ಶೂಟೌಟ್ ನಡೆಸಿ ಸುಮಾರು 10 ವರ್ಷದಿಂದ ನಾಪತ್ತೆಯಾಗಿದ್ದ ಭೂಗತ ಪಾತಕಿ ರವಿ ಪೂಜಾರಿ ಸಹಚರನನ್ನು ಉರ್ವಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಬಂಧಿತನನ್ನು ಕರಾಡ್ ಗಣೇಶ್ ಲಕ್ಷ್ಮಣ್ ಸಕಟ್ ಎಂದು ಗುರುತಿಸಲಾಗಿದೆ. ಈತ ಭೂಗತ ಪಾತಕಿ ರವಿಪೂಜಾರಿಯ ಸಹಚರನಾಗಿದ್ದು, ಆತನ ಅಣತಿ ಮೇಲೆ ಶೂಟೌಟ್ ನಡೆಸಿದ್ದ. ಈತನ ಮೇಲೆ ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ 2015 ರಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ. ಈತನ ವಿರುದ್ದ ಜೆಎಂಎಫ್ ಸಿ 3ನೇ ನ್ಯಾಯಾಲಯ ವಾರಂಟ್ ಹೊರಡಿಸಿದ್ದು, ಈತನನ್ನು ಮಹಾರಾಷ್ಟ್ರ ರಾಜ್ಯದ ಪಂಡರಾಪುರ ಎಂಬಲ್ಲಿ, ಪೊಲೀಸ್ ಆಯುಕ್ತರ ಮಾರ್ಗದರ್ಶನದಂತೆ ಉರ್ವಾ ಪೊಲೀಸ್ ಠಾಣಾ ನಿರೀಕ್ಷಕರ ತಂಡ ಅರೆಸ್ಟ್ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಈತನ ವಿರುದ್ದ ಮಹಾರಾಷ್ಟ್ರ ರಾಜ್ಯದ ಸತಾರ ಜಿಲ್ಲೆ ಕರಾq ನಲ್ಲಿಯೂ ಆರ್ಮ್ಸ ಆ್ಯಕ್ಟ್ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!