ಕಳೆದ ಎರಡು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಯುವತಿ ಸಾವನ್ನಪ್ಪಿದ ಘಟನೆ ನಡೆದಿದೆ.

ಕಡಬ ತಾಲೂಕಿನ ಕುಂತೂರು ಗ್ರಾಮದ ಇಡಾಳ ನಿವಾಸಿ ಕರಿಯಪ್ಪ ಯಾನೆ ಕೇಶವ ಗೌಡ ಎಂಬವರ ಪುತ್ರಿ 23ವರ್ಷದ ಶ್ವೇತಾ ಮೃತಪಟ್ಟಿರುವ ಯುವತಿಯಾಗಿದ್ದಾಳೆ. ಪದವೀಧರೆಯಾಗಿದ್ದ ಈಕೆ ಕಳೆದ ಎರಡು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ರು. ಆರಂಭದಲ್ಲಿ ಜ್ವರ ಕಾಣಿಸಿಕೊಂಡು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಬಳಿಕ ಮಂಗಳೂರಿನ ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದರೂ ಕಿಡ್ನಿ ಸಂಭAದಿತ ಖಾಯಿಲೆ ವಾಸಿಯಾಗಿರಲಿಲ್ಲ. ಸೋಮವಾರ ಬೆಳಿಗ್ಗೆ ಉಸಿರಾಟದ ತೊಂದರೆ ಕಾಣಿಸಿಕೊಂಡು ಆಲಂಕಾರಿನ ಖಾಸಗಿ ಕ್ಲಿನಿಕ್‌ಗೆ ಕರೆದುಕೊಂಡು ಬಂದು ಪುತ್ತೂರಿನ ಆಸ್ಪತ್ರೆಗೆ ಕೊಂಡಯ್ದರೂ ಅಷ್ಟರಲ್ಲಿ ಆಕೆಯ ಪ್ರಾಣ ಪಕ್ಷಿ ಹಾರಿಹೋಗಿತ್ತು. ಮೃತ ಯವತಿ ತಂದೆ, ತಾಯಿ ಹಾಗೂ ಸಹೋದರನನ್ನು ಅಗಲಿದ್ದಾರೆ.



