ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಕಡಿತವಾಗಿದೆ. 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯಲ್ಲಿ 33.50 ರೂ.ಗಳಷ್ಟು ಕಡಿಮೆ ಮಾಡಲು ತೈಲ ಕಂಪನಿಗಳು ನಿರ್ಧರಿಸಿವೆ.

ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಗಳನ್ನು ಪರಿಷ್ಕರಿಸಿವೆ. ಪರಿಷ್ಕೃತ ದರವು ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬಂದಿದೆ. ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಕೆಲವು ವಾಹನಗಳಲ್ಲಿ ವ್ಯಾಪಕವಾಗಿ ಬಳಸಲಾಗುವ ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ಸ್ವಲ್ಪ ಕಡಿಮೆ ಮಾಡಲಾಗಿದೆ. 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯಲ್ಲಿ 33.50 ರೂ.ಗಳಷ್ಟು ಕಡಿಮೆ ಮಾಡಲು ತೈಲ ಕಂಪನಿಗಳು ನಿರ್ಧರಿಸಿವೆ.



