ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಶಾಸಕ ವೇದವ್ಯಾಸ ಕಾಮತ್ ರವರ ಉಪಸ್ಥಿತಿಯಲ್ಲಿ ನೂತನ ಶಕ್ತಿಕೇಂದ್ರದ ಪ್ರಮುಖರ ಸಭೆ

ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ನೂತನ ಶಕ್ತಿಕೇಂದ್ರದ ಪ್ರಮುಖರ ಸಭೆಯು ಶಾಸಕ ವೇದವ್ಯಾಸ ಕಾಮತ್ ರವರ ಉಪಸ್ಥಿತಿಯಲ್ಲಿ ಅಟಲ್ ಸೇವಾ ಕೇಂದ್ರದಲ್ಲಿ ನಡೆಯಿತು

ಈ ವೇಳೆ ಮಾತನಾಡಿದ ಶಾಸಕರು, ಪಕ್ಷ ಸಂಘಟನಾತ್ಮಕ ನೆಲೆಯಲ್ಲಿ ಶಕ್ತಿಕೇಂದ್ರದ ಪ್ರಮುಖರಿಗೆ ಅತ್ಯಂತ ಹೆಚ್ಚಿನ ಜವಾಬ್ದಾರಿ ಇದೆ. ನಿಮ್ಮೆಲ್ಲರ ಸಾಮರ್ಥ್ಯ ಅರಿತೇ ಪಕ್ಷವು ಅಂತಹ ಜವಾಬ್ದಾರಿಯುತ ಸ್ಥಾನಕ್ಕೆ ಆಯ್ಕೆ ಮಾಡಿದ್ದು, ಅದಕ್ಕೆ ತಕ್ಕಂತೆ ಕಾರ್ಯ ನಿರ್ವಹಿಸುವ ಸಂಕಲ್ಪ ನಿಮ್ಮದಾಗಲಿ. ಹಿರಿಯ ಕಾರ್ಯಕರ್ತರಿಂದ ಸಲಹೆಗಳನ್ನು ಪಡೆದುಕೊಂಡು, ಕಿರಿಯ ಕಾರ್ಯಕರ್ತರನ್ನು ಜೋಡಿಸಿಕೊಂಡು ಪಕ್ಷವನ್ನು ಮುನ್ನಡೆಸುವ ಜವಾಬ್ದಾರಿ ನಿಮ್ಮದು. ಮುಂಬರುವ ದಿನಗಳಲ್ಲಿ ಮಂಡಲ ಹಾಗೂ ಜಿಲ್ಲೆಯ ನೇತೃತ್ವದಲ್ಲಿ ಪಕ್ಷದ ಅನೇಕ ಚಟುವಟಿಕೆಗಳು ನಡೆಯಲಿದ್ದು, ಪ್ರತಿಯೊಂದು ಕಾರ್ಯಕ್ರಮದಲ್ಲೂ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ, ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳು, ಜನ ವಿರೋಧಿ ನೀತಿಗಳು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ನಿಮ್ಮ ಸಹಕಾರ ಅತ್ಯಗತ್ಯವಾಗಿದ್ದು, ಮತ್ತೊಮ್ಮೆ ಎಲ್ಲರಿಗೂ ಶುಭವಾಗಲಿ, ಭಾರತೀಯ ಜನತಾ ಪಾರ್ಟಿ ಎಂಬ ಕುಟುಂಬದಲ್ಲಿ ಜೊತೆಯಾಗಿ ಸಾಗೋಣ ಎಂದು ಆಶಿಸುತ್ತೇನೆ ಎಂದರು. ಈ ಸಂದರ್ಭದಲ್ಲಿ ಮಂಡಲದ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ಪ್ರಧಾನ ಕಾರ್ಯದರ್ಶಿಗಳಾದ ರಮೇಶ್ ಹೆಗ್ಡೆ ಹಾಗೂ ಲಲ್ಲೇಶ್ ಕುಮಾರ್, ಹಾಗೂ ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!