ಮನೆಯೊಂದರಲ್ಲಿ ಅಕ್ರಮವಾಗಿ ದನಗಳನ್ನು ವಧೆ ಮಾಡಿ ಮಾಂಸ ಮಾರಾಟ ಮಾಡಲು ತಯಾರಿ ಮಾಡುತ್ತಿದ್ದ ವೇಳೆ ಬಂಟ್ವಾಳ ಗ್ರಾಮಾಂತರ ಪೋಲೀಸರ ತಂಡ ದಾಳಿ ನಡೆಸಿದೆ.

ಬಂಟ್ವಾಳ ತಾಲೂಕಿನ ಮಾರಿಪಳ್ಳ ಎಂಬಲ್ಲಿ ಹಸನಬ್ಬ ಎಂಬಾತ ಆತನ ಮನೆಯಲ್ಲಿಯೇ ಅಕ್ರಮವಾಗಿ ಹಸುಗಳನ್ನು ಕಡಿಯುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಇಂದು ಮುಂಜಾನೆ 5 ಗಂಟೆ ವೇಳೆ ಪೊಲೀಸರು ದಾಳಿ ಮಾಡಿದ್ದಾರೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿದೆ. ಹಸನಬ್ಬನ ಜೊತೆ ಮತ್ತೊಬ್ಬ ವ್ಯಕ್ತಿ ಸೇರಿಕೊಂಡು ಹಸುಗಳನ್ನು ಕಡಿದು ಮಾಂಸ ಮಾಡಿ ಮಾರಾಟ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಪೋಲೀಸರ ದಾಳಿ ವೇಳೆ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಆರೋಪಿಗಳು ಒಂದು ದನವನ್ನು ಕಡಿದು ಮಾಂಸ ಮಾಡಲು ಸಿದ್ಧರಾಗಿದ್ದು, ಪೋಲೀಸರು ಬರುವುದನ್ನು ಕಂಡು ಇಬ್ಬರು ಓಡಿಹೋಗಿದ್ದಾರೆ. ಇನ್ನೂ ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪೋಲೀಸರು ನೀಡಬೇಕಿದ್ದು, ಸ್ಥಳದಲ್ಲಿದ್ದ ಸೊತ್ತುಗಳನ್ನು ಪೋಲೀಸರು ವಶಪಡಿಸಿಕೊಂಡಿದ್ದಾರೆ.



