ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿಯಾಗಿಸಿದ ಪ್ರಕರಣ; ಬೆದರಿಕೆಯ ಹಿನ್ನೆಲೆ ಪೊಲೀಸ್ ರಕ್ಷಣೆಗೆ ಮನವಿ

ಮದುವೆಯಾಗುವುದಾಗಿ ನಂಬಿಸಿ ವಂಚನೆ ಮಾಡಿದ ಪುತ್ತೂರಿನ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಠಾಣಾ ಪೊಲೀಸರು ಮೈಸೂರಿನ ಟಿ.ನರಸಿಪುರದಲ್ಲಿ ವಶಕ್ಕೆ ಪಡೆದುಕೊಂಡಿದ್ದರು. ಆರೋಪಿ ಶ್ರೀ ಕೃಷ್ಣ ಜೆ. ರಾವ್(21) ಎಂಬಾತನನ್ನು ಜುಲೈ 04ರಂದು ರಾತ್ರಿ ವಶಕ್ಕೆ ಪಡೆಯಲಾಗಿತ್ತು.

ಬಳಿಕ ಜುಲೈ 5ರಂದು ಆರೋಪಿಯನ್ನು ಬಂಧನ ಮಾಡಲಾಗಿದೆ. ಜೂನ್ 24ರಂದು ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಯುವಕನ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆ ಪೋಲಿಸರಿಗೆ ದೂರು ನೀಡಿದ್ದಾರೆ. ನಾನು ಮತ್ತು ಶ್ರೀ ಕೃಷ್ಣ ಜಿ. ರಾವ್ ಒಂದೇ ಊರಿನವರಾಗಿದ್ದು, 9ನೇ ತರಗತಿಯಿಂದ ಪ್ರೀತಿಸುತ್ತಿದ್ದು, ನನ್ನನ್ನು ಮದುವೆಯಾಗುತ್ತೇನೆಂದು ನಂಬಿಸಿ ಗರ್ಭಿಣಿಯಾಗಿಸಿ, ನಂತರ ಅವರ ಮನೆಯವರು (ಅಪ್ಪ-ಅಮ್ಮ) ನಮ್ಮಿಬ್ಬರಿಗೂ ಮದುವೆ ಮಾಡಿಸುತ್ತೇವೆಂದು ಹೇಳಿ ದಿನ ಕಳೆದಂತೆ ಮದುವೆ ಮಾಡಿಕೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ. ನನಗೆ ಬೇರೆ ದಾರಿ ಕಾಣದೇ ದಿನಾಂಕ 24.06.2025 ರಂದು ಅವರ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದೆ ಎಂದು ಹೇಳಿದ್ದಾರೆ. ಆಗ ಶ್ರೀ ಕೃಷ್ಣ ಜಿ. ಲಾವ್ ರವರ ತಂದೆ ಶ್ರೀ ಜಗನ್ನಿವಾಸರವರು ಪೊಲೀಸ್ ಠಾಣೆಗೆ ಬಂದು ಆದಷ್ಟು ಬೇಗ ಮದುವೆ ಮಾಡಿಸುತ್ತೇನೆ, ಹೆರಿಗೆ ಸಮಯದಲ್ಲಿ ಮಗುವಿನ ತಂದೆಯ ಹೆಸರನ್ನು ಶ್ರೀ ಕೃಷ್ಣ ಜಿ. ರಾವ್ ಎಂದು ಬರೆಯಿರಿ ಎಂದು ಮುಚ್ಚಳಿಕೆ ಬರೆದುಕೊಟ್ಟರು. ಸ್ವಲ್ಪ ದಿನ ಕಳೆದ ನಂತರ ಮದುವೆ ಯಾವಾಗ ಮಾಡಿಸುವಿರಿ, ಹೆಸರಿಗೆ ಸಮಯ ಹತ್ತಿರ ಬರುತ್ತಿದೆ ಎಂದಾಗ ಶ್ರೀ ಜಗನ್ನಿವಾಸರವರು ನನ್ನ ಮಗ ಈಗ ಮೇಜರ್ ಆಗಿದ್ದಾನೆ. ಅವನು ನಿನ್ನನ್ನು ಒಪ್ಪುತ್ತಿಲ್ಲ, ನಾನೂ ಕೂಡ ಈಗ ಒಪ್ಪುವುದಿಲ್ಲ ಎಂದು ಹೇಳಿದರು. ಮತ್ತೆ ನಾನು ಪೊಲೀಸ್ ಠಾಣೆಗೆ ಹೋಗಿ ನಡೆದ ವಿಷಯವನ್ನು ಪೊಲೀಸರಿಗೆ ತಿಳಿಸಿದಾಗ ಅದಕ್ಕೆ ಸಂಬಂಧಿಸಿದಂತೆ ಎಫ್.ಐ.ಆರ್. ಕೂಡ ದಾಖಲಾಗಿದ್ದು ಕೂಡ ಅದರಂತೆ ಕೃಷ್ಣ ಜಿ. ರಾವ್‌ರವರನ್ನು ಬಂಧಿಸಲಾಗಿತ್ತು. ನಂತರ ಮಾನ್ಯ ನ್ಯಾಯಾಲಯವು ಅವರ ಜಾಮೀನನ್ನು ಕೂಡ ರದ್ದುಗೊಳಿಸಿತ್ತು. ಇದೀಗ ಬೆದರಿಕೆ ಹಿನ್ನೆಲೆ ಮಗು ಹಾಗೂ ತಾಯಿಯ ಜೀವ ಬೆದರಿಕೆ ಇದೆ ಎಂದು ಐಜಿಪಿ ಅಮೀತ್ ಸಿಂಗ್ ರವರಿಗೆ ಮನವಿಮಾಡಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!