ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು: ಫೈರ್ ಸೇಫ್ಟಿ ಕ್ಲಿಯರೆನ್ಸ್ ಗೆ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಸಮಾನ ಕಾಲಾವಕಾಶ ನೀಡಿ – ಡಾ.ಧನಂಜಯ ಸರ್ಜಿ

ಎನ್.ಬಿ.ಸಿ ಕೋಡ್ (ರಾಷ್ಟ್ರೀಯ ಕಟ್ಟಡ ಸಂಹಿತೆ) ಪ್ರಕಾರ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಒಂದೇ ನಿಯಮ ಇದೆ. ಹಾಗಾಗಿ ತಾರತಮ್ಯ ಮಾಡದೇ ಸರ್ಕಾರಿ ಆಸ್ಪತ್ರೆಗೆ ಫೈರ್ ಕ್ಲಿಯರೆನ್ಸ್ ಗೆ ಎಷ್ಟು ಸಮಯಾವಕಾಶ ನೀಡಲಾಗುತ್ತಿದೆಯೊ ಖಾಸಗಿ ಆಸ್ಪತ್ರೆಗಳಿಗೂ ಅಷ್ಟೇ ಸಮಯವಕಾಶ ನೀಡಿ ಎಂದು ಶಾಸಕ ಡಾ. ಧನಂಜಯ ಸರ್ಜಿ ಒತ್ತಾಯಿಸಿದ್ದಾರೆ.

ಸರ್ಕಾರಿ ಆಸ್ಪತ್ರೆಗಳಿಗೆ ಹೆಚ್ಚು ಕಾಲಾವಕಾಶ ನೀಡಿ ಖಾಸಗಿ ಆಸ್ಪತ್ರೆಗಳಿಗೆ ಕಡಿಮೆ ಕಾಲಾವಕಾಶ ನೀಡಲಾಗುತ್ತಿದೆ ಎಂದು ಸೋಮವಾರ ವಿಧಾನ ಪರಿಷತ್ತಿನಲ್ಲಿ ನಡೆದ 156 ನೇ ಅಧಿವೇಶನದಲ್ಲಿ ಹೇಳಿದ ವಿಧಾನ ಪರಿಷತ್ ಸದಸ್ಯರಾದ ಡಾ.ಧನಂಜಯ ಸರ್ಜಿ ಈ ತಾರತಮ್ಯ ಯಾಕೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರನ್ನು ಪ್ರಶ್ನಿಸಿದರು. ಕರ್ನಾಟಕ ರಾಜ್ಯದಲ್ಲಿ 2878 ಸರ್ಕಾರಿ ಆಸ್ಪತ್ರೆಗಳಲ್ಲಿ ಕೇವಲ 14 ಮಾತ್ರ ಫೈರ್ ಕ್ಲಿಯರೆನ್ಸ್ ಆಗಿದೆ ಅಂದರೆ ಶೇ 00.5% ಮಾತ್ರ, 5850 ಖಾಸಗಿ ಆಸ್ಪತ್ರೆಗಳಲ್ಲಿ 315 ಮಾತ್ರ ಫೈರ್ ಕ್ಲಿಯರೆನ್ಸ್ ಅಂದರೆ ಶೇ .005% ಮಾತ್ರ ಆಗಿದೆ, ಎಲ್ಲ ಸರ್ಕಾರಿ ಆಸ್ಪತ್ರೆಗಳಿಗೆ ಫೈರ್ ಸೇಫ್ಟಿ ಕ್ಲಿಯರೆನ್ಸ್ ತೆಗೆದುಕೊಳ್ಳಲು ಎಷ್ಟು ಕಾಲಾವಕಾಶ ಬೇಕು ಎಂದು ಕೇಳಿದರು. ಕೇವಲ 2 ವರ್ಷದಲ್ಲಿ ರಾಜ್ಯದ 5 ಜಿಲ್ಲಾ ಆಸ್ಪತ್ರೆಗಳಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಈ ಹಿಂದೆ 2014ರಲ್ಲೂ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದ ಸಂದರ್ಭದಲ್ಲಿ ಅಂದಿನ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಅವರು ತೀವ್ರ ನಿಗಾ ಘಟಕದಲಿದ್ದ 28 ನವಜಾತ ಶಿಶುಗಳು ಮತ್ತು 18 ದೊಡ್ಡ ಮಕ್ಕಳನ್ನು ಒಟ್ಟು 46 ಮಕ್ಕಳನ್ನು ಶಿವಮೊಗ್ಗದ ಸರ್ಜಿ ಆಸ್ಪತ್ರೆಗೆ ಸ್ಥಳಾಂತರಿಸಿದ್ದರು, 46 ಜೀವಗಳನ್ನು ಉಳಿಸುವ ಜವಾಬ್ದಾರಿ ನಮ್ಮದಾಗಿತ್ತು ಇದರಲ್ಲಿ ಸರ್ಜಿ ಆಸ್ಪತ್ರೆ ಸಫಲ ಆಗಿದೆ, ಆದ್ದರಿಂದ ಮುಂದೆ ಈ ಘಟನೆಗಳು ಮರುಕಳಿಸದಂತೆ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲೂ ಫೈರ್ ಸೇಫ್ಟಿ ಕ್ಲಿಯರೆನ್ಸ್ ಮಾಡಬೇಕು ಎಂದು ಒತ್ತಾಯಿಸಿದರು. ಆಯುಷ್ಮಾನ್ ಭಾರತ್ ಯೋಜನೆ ಅಡಿ ಸರ್ಕಾರ 63 ಲಕ್ಷ ರೋಗಿಗಳನ್ನು ಚಿಕಿತ್ಸೆ ನೀಡಿದೆ. ಇದರಲ್ಲಿ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಇರುವಂತಹ ರೋಗಿಗಳನ್ನು ಖಾಸಗಿ ಆಸ್ಪತ್ರೆಗೆ ಕಳುಹಿಸಲಾಗುತ್ತದೆ. ಆದರೆ ಕೆ.ಪಿ,ಎಂ.ಎ ಪ್ರಕಾರ ಫೈರ್ ಸೇಫ್ಟಿ ಕ್ಲಿಯರೆನ್ಸ್ ಮಾತ್ರ ಇಲಾಖೆ ಕೊಡುತ್ತಿಲ್ಲ ಇದರಿಂದ ಲಕ್ಷಾಂತರ ರೋಗಿಗಳಿಗೆ ಅನ್ಯಾಯವಾಗುತ್ತಿದೆ ಹಾಗಾಗಿ ನಿಯಮ ಸಡಿಲಿಕರಣಗೊಳಿಸಲು ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶದಲ್ಲಿ ವೈದ್ಯಕೀಯ ಸಂಸ್ಥೆಗಳಿಗೆ ಪ್ರತ್ಯೇಕ ಅಗ್ನಿ ಸುರಕ್ಷತಾ ಕಾಯ್ದೆಯನ್ನು ತರಲಾಗಿದೆ ಆದ್ದರಿಂದ ಕರ್ನಾಟಕದಲ್ಲೂ ಈ ಕಾಯ್ದೆ ತರುವಂತಾಗಬೇಕು ಎಂದು ಆಗ್ರಹಿಸಿದರು. ಇದಕ್ಕೆ ಉತ್ತರಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರು ರಾಜ್ಯದಲ್ಲಿ 40 ರಿಂದ 50 ವರ್ಷಗಳ ಹಳೆಯ ಸರ್ಕಾರಿ ಆಸ್ಪತ್ರೆಗಳಿವೆ, ಅಂತಹ ಆಸ್ಪತ್ರೆಗಳಿಗೆ ಈಗಿರುವ ಮಾನದಂಡದ ಪ್ರಕಾರ ಫೈರ್ ಸೇಫ್ಟಿ ಕ್ಲಿಯರೆನ್ಸ್ ಸಿಗುವುದು ಕಷ್ಟವಾಗುತ್ತಿದೆ. ಇದಕ್ಕೆ ಸುಮಾರು 550 ಕೋಟಿ ಅನುದಾನ ಬೇಕಾಗುತ್ತದೆ, ಏಕಕಾಲದಲ್ಲಿ ಎಲ್ಲವನ್ನು ಮಾಡುವುದಕ್ಕಾಗುವುದಿಲ್ಲ ಹಂತಹಂತವಾಗಿ ಮಾಡುತ್ತೇವೆ ಎಂದರು. ಡಾ.ಧನಂಜಯ ಸರ್ಜಿ ಅವರ ಸಲಹೆಯನ್ನು ತೆಗೆದುಕೊಂಡು ಅಗ್ನಿಶಾಮಕ ಇಲಾಖೆ ಮತ್ತು ಖಾಸಗಿ ಆಸ್ಪತ್ರೆಗಳ ಜೊತೆ ಸಭೆ ನಡೆಸುತ್ತೇನೆ. ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಹಳೆಯ ಕಟ್ಟಡಗಳಿಗೆ ಸ್ವಲ್ಪ ವಿನಾಯಿತಿ ನೀಡಿ, ನಿಯಮ ಸಡಿಲೀಕರಣಗೊಳಿಸಲು ಮನವಿ ಮಾಡಿದ್ದೇವೆ. ಈ ಬಗ್ಗೆ ಗೃಹ ಇಲಾಖೆ ಜೊತೆಯಲ್ಲೂ ಸಭೆ ನಡೆಸುತ್ತೇನೆ. ಈ ಸಮಸ್ಯೆ ಬಗೆಹರಿಸಲು ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!