ಕಾಲೇಜು ಬಸ್ಸಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಿರ್ವಾಹಕ ಕರ್ತವ್ಯದಲ್ಲಿದ್ದಾಗಲೇ ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ಅಡ್ಯಾರ್ ಸಮೀಪ ಇಂದು ಬೆಳಗ್ಗಿನ ವೇಳೆ ಸಂಭವಿಸಿದೆ.

ಕುತ್ತಾರು ನಿವಾಸಿ 40ವರ್ಷದ ಸಂತೋಷ್ ಮೃತಪಟ್ಟಿದ್ದಾರೆ. ನಿಟ್ಟೆ ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯಕ್ಕೆ ಸೇರಿದ ಬಸ್ಸಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು ಬೆಳಗ್ಗಿನ ವೇಳೆ ಶಾಲಾ ವಿದ್ಯಾರ್ಥಿಗಳನ್ನು ಶಾಲೆಗೆ ಕರೆತರಲು ತೆರಳುವ ಟ್ರಿಪ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾಗ ಘಟನೆ ನಡೆದಿದೆ. ಬಸ್ಸಿನ ಒಳಗಡೆ ಶಾಲಾ ವಿದ್ಯಾರ್ಥಿಗಳನ್ನು ಹತ್ತಿಸುವ ಸಂದರ್ಭದಲ್ಲಿ ಏಕಾಏಕಿ ಕುಸಿದುಬಿದ್ದಿದ್ದಾರೆ. ತಕ್ಷಣ ಸ್ಥಳೀಯರು ಸೇರಿಕೊಂಡು ಆಸ್ಪತ್ರೆ ಸೇರಿಸುವ ಪ್ರಯತ್ನ ಮಾಡಿದ್ರೂ, ದಾರಿಮಧ್ಯೆ ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆಂದು ಮೇಲ್ನೋಟಕ್ಕೆ ತಿಳಿದುಬಂದಿದೆ. ಮೃತರು ಹಲವು ವರ್ಷಗಳಿಂದ ನಿಟ್ಟೆ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ರು. ಪತ್ನಿ ಹಾಗೂ ಮಕ್ಕಳನ್ನು ಅಗಲಿದ್ದಾರೆ. ನಿಟ್ಟೆ ಸಂಸ್ಥೆ ಹಲವು ವರ್ಷಗಳಿಂದ ಸರಕಾರಿ ಶಾಲೆ, ಆಶ್ರಮಗಳಿಂದ ಕಲಿಯುವ ವಿದ್ಯಾರ್ಥಿಗಳನ್ನು ಶಾಲೆಗೆ ಕರೆತರುವ ಪ್ರಯತ್ನವನ್ನು ಹಲವು ವರ್ಷಗಳಿಂದ ಮಾಡುತ್ತಾ ಬಂದಿದ್ದಾರೆ. ಇದೇ ಟ್ರಿಪ್‌ನಲ್ಲಿ ಸಂತೋಷ್ ಕರ್ತವ್ಯ ನಿರ್ವಹಿಸುತ್ತಿದ್ರು ಎಂದು ತಿಳಿದು ಬಂದಿದೆ.



