ಜನ ಮನದ ನಾಡಿ ಮಿಡಿತ

Advertisement

ಕಲ್ಲಡ್ಕ: ಕಲ್ಲಡ್ಕ ಮೇಲ್ಸತುವೆಯಲ್ಲಿ ಕೆಟ್ಟು ಹೋಗಿ ನಿಂತಿದ್ದ ಲಾರಿಗೆ ಇನ್ನೊಂದು ಲಾರಿ ಢಿ#ಕ್ಕಿ..!

ಹೊಸದಾಗಿ ನಿರ್ಮಿತವಾಗಿ ಸಂಚಾರಕ್ಕೆ ಮುಕ್ತವಾಗಿರುವ ಕಲ್ಲಡ್ಕ ಮೇಲ್ಸತುವೆಯಲ್ಲಿ ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಇನ್ನೊಂದು ಲಾರಿ ಡಿಕ್ಕಿ ಹೊಡೆದ ಘಟನೆ ಇಂದು ಬೆಳ್ಳಂಬೆಳ್ಳಗೆ ನಡೆದಿದೆ.

ಚಾಲಕ ಉಪ್ಪಿನಂಗಡಿ ನಿವಾಸಿ ಖಲೀಲ್ ಎಂಬಾತ ಅಲ್ಪಸ್ವಲ್ಪ ಗಾಯಗಳೊಂದಿಗೆ ಪಾರಾಗಿದ್ದು, ಆತನನ್ನು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನಿಂದ ಮಂಗಳೂರಿಗೆ ಕಂಪೆನಿಯೊಂದರ ಐಸ್‌ಕ್ರೀಮ್ ಸಾಗಿಸುವ ಪ್ರೀಝರ್ ವಾಹನ ಡಿಕ್ಕಿಯಾಗಿದ್ದು, ಡಿಕ್ಕಿಯ ರಭಸಕ್ಕೆ ಲಾರಿ ಸಂಪೂರ್ಣ ಜಖಂಗೊಂಡಿದೆ. ಕಳೆದ ಎರಡು ದಿನಗಳಿಂದ ಲಾರಿಯೊಂದು ಕಲ್ಲಡ್ಕ ಪ್ಲೈ ಓವರ್ ಮೇಲೆ ಕೆಟ್ಟು ನಿಂತಿದ್ದು, ಲಾರಿ ಚಾಲಕನಿಗೆ ಮುಂಜಾನೆ ವೇಳೆ ಕಣ್ಣಿಗೆ ಕಾಣದೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ. ಹೊಸ ಪ್ಲೈ ಓವರ್‌ನಲ್ಲಿ ಇನ್ನು ಕೂಡ ಕಾಮಗಾರಿ ನಡೆಯುವ ಹಿನ್ನೆಲೆಯಲ್ಲಿ ಬೀದಿ ದೀಪಗಳನ್ನ ಆಳವಡಿಸಲಾಗಿಲ್ಲ. ಜೊತೆಗೆ ಕೆಟ್ಟು ನಿಂತ ಲಾರಿಗೆ ಯಾವುದೇ ಸೂಚನ ಫಲಕ ಕೂಡ ಅಳವಡಿಸಿರಲಿಲ್ಲ ಎಂಬ ಆರೋಪ ಕೂಡ ಕೇಳಿ ಬಂದಿವೆ. ಇನ್ನು ಘಟನಾ ಸ್ಥಳಕ್ಕೆ ಟ್ರಾಫಿಕ್ ಪೋಲೀಸರು ಬೇಟಿ ನೀಡಿದ್ದಾರೆ.

Leave a Reply

Your email address will not be published. Required fields are marked *

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

error: Content is protected !!