ಲಾರಿ ಚಾಲಕನ ಮೈಮೇಲೆ ಮರದ ಗೆಲ್ಲು ಬಿದ್ದು ಗಂಭೀರವಾಗಿ ಗಾಯಗೊಂಡಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.

ಪೆರಾಜೆ ಗ್ರಾಮದ ಕುಡೋಲು ನಿವಾಸಿ ಜಗದೀಶ್ ಗೌಡ ಎಂಬವರು ಮೃತಪಟ್ಟ ದುರ್ದೈವಿಯಾಗಿದ್ದಾರೆ. ಇವರು ಮೂಡಬಿದಿರೆಯ ಫೀಡ್ ತಯಾರಿಕೆ ಮಾಡುವ ಖಾಸಗಿ ಕಂಪೆನಿಯೊಂದರಲ್ಲಿ ಲಾರಿ ಚಾಲಕ ವೃತ್ತಿಯನ್ನು ಮಾಡುತ್ತಿದ್ದು, ಕಂಪೆನಿಯಿಂದ ಫೀಡ್ ಲೋಡ್ ಮಾಡಿ ಕಾಸರಗೋಡು ಜಿಲ್ಲೆಗೆ ಹೋಗಿದ್ರು. ಬದಿಯಡ್ಕ ಎಂಬಲ್ಲಿ ರಸ್ತೆಯಲ್ಲಿ ಅಡ್ಡಲಾಗಿ ಇದ್ದ ಮರದ ಗೆಲ್ಲನ್ನು ಬದಿಗೆ ಸರಿಸಲು ಲಾರಿಯಿಂದ ಕೆಳಗೆ ಇಳಿದಿದ್ದ ಸಂದರ್ಭದಲ್ಲಿ ಮತ್ತೊಂದು ಗೆಲ್ಲು ಇವರ ಮೈಮೇಲೆ ಬಿದ್ದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸಿದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಕಾಸರಗೋಡು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



