ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಸ್ವಾತಂತ್ರ‍್ಯ ದಿನದ ಸಂದರ್ಭ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ

ಸಂವಿಧಾನದ ರಕ್ಷಣೆ ಕುರಿತು ಸ್ವಾತಂತ್ರ‍್ಯ ದಿನದ ಸಂದರ್ಭದಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಆಯೋಜಿಸುವಂತೆ ಕೆ.ಪಿ.ಸಿ.ಸಿ.ನಿರ್ದೇಶನ ನೀಡಿದ್ದು, ಈ ಹಿನ್ನೆಲೆಯಲ್ಲಿ ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಜಾಗೃತಿ ಕಾರ್ಯಕ್ರಮ ಮಾಜಿ ಸಚಿವ ಬಿ.ರಮಾನಾಥ ರೈ ನೇತ್ರತ್ವದಲ್ಲಿ ನಡೆಯಿತು. ಈ ವೇಳೆ ಮಾಜಿ ಸಚಿವ ರಮಾನಾಥ ರೈ ಮಾತನಾಡಿ, ರಾಹುಲ್ ಗಾಂಧಿಯವರ ಮತ ಕಳವು ಕುರಿತು ಹಮ್ಮಿಕೊಂಡಿರುವ ಜಾಗೃತಿ ಕಾರ್ಯಕ್ರಮಕ್ಕೆ ನಮ್ಮ ಬೆಂಬಲವಿದೆ.

ಚುನಾವಣಾ ಇಲಾಖೆಗೆ ಮಾತನಾಡಿದಾಗ ಇಲಾಖೆಯೇ ಉತ್ತರ ನೀಡಬೇಕಾದ ನಿಯಮ. ಆದರೆ ಇದಕ್ಕೆ ಬಿಜೆಪಿ ಯಾಕೆ ಉತ್ತರ ನೀಡುವ ಕಾರ್ಯಕ್ಕೆ ಮುಂದಾಗಿದೆ, ಹಾಗಾದರೆ ಬಿಜೆಪಿಯವರು ಮತಕಳ್ಳರಾ? ಎಂದು ಪ್ರಶ್ನಿಸಿದ್ದಾರೆ. ಅರ್ಹ ಮತದಾರರಿಗೆ ಅನ್ಯಾಯವಾಗುತ್ತಿದ್ದು, ಪಾರದರ್ಶಕವಾಗಿ ಮತಪಟ್ಟಿಗೆ ಸೇರ್ಪಡೆ ಕಾರ್ಯ ಆಗಬೇಕು ಎಂದು ಅವರು ಒತ್ತಾಯ ಮಾಡಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಮುಖರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಪದ್ಮಶೇಖರ್ ಜೈನ್, ವಾಸು ಪೂಜಾರಿ ಹಾಗೂ ಅನೇಕ ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!