ಕಾಪು ತಾಲ್ಲೂಕು ಮಟ್ಟದ ವತಿಯಿಂದ ಆ. 15 ರಂದು ನಡೆದ “ಕಾಪು ತಾಲ್ಲೂಕು ಮಟ್ಟದ 79 ನೇ ಸ್ವಾತಂತ್ರೋತ್ಸವ” ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.

ಕಾಪು ತಹಶೀಲ್ದಾರರಾದ ಪ್ರತೀಭಾ ಆರ್ ಅವರು ಧ್ವಜಾರೋಹಣ ನೆರವೇರಿಸಿದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕಾಪು ಪುರಸಭೆಯ ಅಧ್ಯಕ್ಷರಾದ ಹರಿಣಾಕ್ಷಿ ದೇವಾಡಿಗ, ಉಪಾಧ್ಯಕ್ಷ ಸರೀತಾ ಶಿವಾನಂದ ಹಾಗೂ ಮತ್ತಿತ್ತರರು ಉಪಸ್ಥಿತರಿದ್ದರು.



