ಜನ ಮನದ ನಾಡಿ ಮಿಡಿತ

Advertisement

ಪುತ್ತೂರು; ಹೆದ್ದಾರಿಯ ಪಕ್ಕದಲ್ಲಿಯೇ ನಿಯಮಬಾಹಿರವಾಗಿ ನಿರ್ಮಿಸಲಾದ ಪೆಟ್ರೋಲ್‌ಪಂಪ್..!

 

ನೆಟ್ಟಣಿಗೆ ಮುಡ್ನೂರು ಗ್ರಾಪಂ ವ್ಯಾಪ್ತಿಯಲ್ಲಿನ ಕೊಟ್ಯಾಡಿಯಲ್ಲಿ ರಾಜ್ಯ ಹೆದ್ದಾರಿಯ ಪಕ್ಕದಲ್ಲಿಯೇ ನಿಯಮಬಾಹಿರವಾಗಿ ನಿರ್ಮಿಸಲಾದ ಪೆಟ್ರೋಲ್‌ಪಂಪ್ ಪರವಾನಿಗೆ ಇಲ್ಲದೆ ನಡೆಯುತ್ತಿದ್ದು, ಇದರಲ್ಲಿ ಸೋರಿಕೆ ಇದೆ ಎಂಬ ಮಾಹಿತಿ ಇದೆ.

 

 

ರಸ್ತೆಯ ಬದಿಯಲ್ಲಿ ಇಂಟರ್‌ಲಾಕ್ ಅಳವಡಿಕೆ ಮಾಡಿದ ಪರಿಣಾಮ ಚರಂಡಿ ಪೂರ್ಣವಾಗಿ ಮುಚ್ಚಲ್ಪಟ್ಟಿದೆ. ತಕ್ಷಣ ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರಾದ ಸೂಫಿ ಇಂತಿಯಾಜ್, ಉಮ್ಮರ್ ಫಾರೂಕ್ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿ, ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಪ್ರಸ್ತುತ ನಿವೃತ್ತರಾಗಿರುವ ಇಬ್ರಾಹಿಂ ಅವರ ಸಹೋದರನ ಮಗಳು ನಿಜಿಮಾ ಆಲಿ ಮಾಣಿಪ್ಪಾಡಿ ಅವರ ಹೆಸರಲ್ಲಿರುವ ಈ ಪೆಟ್ರೋಲ್ ಪಂಪ್‌ಗೆ ಗ್ರಾಪಂನಿAದ ಪರವಾನಿಗೆ ಇಲ್ಲ. ಹಾಗಿದ್ದರೂ ಅನಧಿಕೃತವಾಗಿ ಇದನ್ನು ಪೆಂಟ್ರೋಲ್ ಪಂಪ್‌ನ್ನು ನಡೆಸಲಾಗುತ್ತಿದೆ.

ರಾಜ್ಯ ಹೆದ್ದಾರಿಯಿಂದ ಕನಿಷ್ಟ ೪೦ ಮೀಟರ್ ಬಿಟ್ಟು ಕಟ್ಟಡ ನಿರ್ಮಾಣ ಮಾಡಬೇಕು ಎಂಬುವುದು ಕಡ್ಡಾಯವಾದ ನಿಯಮ. ಆದರೆ ಈ ಪೆಟ್ರೋಲ್ ಪಂಪು ರಸ್ತೆಯಿಂದ ಕೇವಲ ೨೦ ಮೀಟರ್ ದೂರದಲ್ಲಿ ನಿರ್ಮಿಸಲಾಗಿದೆ. ಅನಧಿಕೃತವಾದ ಮಾನದಂಡವನ್ನೇ ಪಾಲಿಸದೆ ನಿರ್ಮಿಸಲಾಗಿರುವ ಈ ಪೆಟ್ರೋಲ್ ಪಂಪ್ ಬಗ್ಗೆ ಯಾವುದೇ ಇಲಾಖೆಯೂ ತಲೆಕೆಡಿಸಿಕೊಂಡಿಲ್ಲ. ಬಡವರ್ಗದ ವ್ಯಕ್ತಿಯೊಬ್ಬ ರಸ್ತೆ ಬದಿಯಲ್ಲಿ ಗೂಡಂಗಡಿ ಹಾಕಿದರೆ ತಕ್ಷಣ ತೆಗೆದು ಬಿಸಾಡುವ ಅಧಿಕಾರಿಗಳು ಈ ಕಟ್ಟಡ ಅನಧಿಕೃತವಾಗಿದ್ದರೂ ಮೌನವಾಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಇನ್ನು ಈ ಸಂದರ್ಭದಲ್ಲಿ ಅಬ್ದುಲ್ ಹಮೀದ್, ಅಬ್ದುಲ್ ಜವಾದ್, ಶಮೀಮ್, ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

error: Content is protected !!