ಮಣಿಪಾಲ ಈಶ್ವನಗರದ ಡೌನ್ ಟೌನ್ ಬಾರ್ ಆಂಡ್ ರೆಸ್ಟೋರೆಂಟ್‌ನ ಪಾಲುದಾರ ಕಾರ್ಕಳ ಬೈಲೂರಿನ ನಿವಾಸಿ ಕೃಷ್ಣರಾಜ್ ಹೆಗ್ಡೆ ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ರಾಡಿಯ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಉಡುಪಿ-ಮಣಿಪಾಲದಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಇವರು, ತಾಯಿ, ಪತ್ನಿ, ಪುತ್ರನನ್ನು ಅಗಲಿದ್ದಾರೆ. ಬೈಲೂರಿನಲ್ಲಿ ಧಾರ್ಮಿಕ ಕಾರ್ಯಕ್ರಮಗಳಲ್ಲಿಯೂ ಮುಂಚೂಣಿಯಲ್ಲಿ ಸಕ್ರಿಯರಾಗಿದ್ದು, ಇನ್ನು ಈ ಬಗ್ಗೆ ಹಿರಿಯಡಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



