ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಪಾರಂಪರಿಕ ಆಚರಣೆಗೆ ಯಾವುದೇ ಆಕ್ಷೇಪ ಇರುವುದಿಲ್ಲ; ಅನಿಲ್ ಕುಮಾರ್ ಭೂಮರೆಡ್ಡಿ ಹೇಳಿಕೆ

ಮೊದಲಿನಿಂದ ಆಚರಣೆ ಮಾಡಿಕೊಂಡು ಬಂದಂತೆ ಪಾರಂಪರಿಕ ಆಚರಣೆಗೆ ಯಾವುದೇ ಆಕ್ಷೇಪ ಇರುವುದಿಲ್ಲ ಎಂದು ದ.ಕ. ಜಿಲ್ಲಾ ಎಡಿಶನಲ್ ಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ ಹೇಳಿದ್ದಾರೆ.

ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬಗಳ ಹಿನ್ನಲೆಯಲ್ಲಿ ನಗರದ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ನಡೆದ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ್ರು. ಜಿಲ್ಲೆಯ ಜನತೆ ಮುಕ್ತ ಮನಸ್ಥಿತಿಯವರು ಹಾಗೂ ಸೌಹಾರ್ದತೆಯನ್ನು ಕಾಪಾಡುವವರು ಎಂಬುದು ಇಲ್ಲಿನವರ ಮಾತಿನಲ್ಲಿ ಕಾಣುತ್ತಿದೆ. ಕಳೆದ ಮೂರು ವರ್ಷಗಳಿಂದ ಈದ್ ಹಾಗೂ ಚೌತಿ ಕೆಲವು ದಿನಗಳ ಅಂತರದಲ್ಲೇ ಬರುತ್ತಿರುವುದು ದೇವರ ಶುಭ ಸಂಕೇತ ಎಂದು ಭಾವಿಸಬೇಕು. ಕೆಲವು ನಿಬಂಧನೆ ಯಾಕೆ ಎಂದರ ಸಮಾಜದ ಎಲ್ಲರೂ ಸೌಹಾರ್ದವಾಗಿ ಆಚರಣೆ ಆಗಬೇಕು. ಗೋಡೆ ಹಾಕಲು ನಮಗೂ ಇಷ್ಟ ಇಲ್ಲ. ಕೆಲವು ಜನ ಕಿಡಿಗೇಡಿಗಳಿಂದ ಎಲ್ಲರಿಗೂ ಸಮಸ್ಯೆ ಆಗುತ್ತದೆ. ನೀವು ಮಫ್ತಿಯಲ್ಲಿ ಸಂಭ್ರಮಿಸಿದರೆ ನಾವು ಸಮವಸ್ತçದಲ್ಲಿ ಹಬ್ಬಗಳ ಸಂಭ್ರಮ ಪಡುತ್ತೇವೆ ಎಂದು ಹೇಳಿದ್ದಾರೆ. ಇನ್ನು ಈ ಸಂಧರ್ಭದಲ್ಲಿ ಪುತ್ತೂರು ಡಿವೈಎಸ್ಪಿ ಅರುಣ್ ನಾಗೇಗೌಡ, ಮಹಿಳಾ ಠಾಣೆಯ ಇನ್‌ಸ್ಪೆಕ್ಟರ್ ಸುನೀಲ್ ಕುಮಾರ್, ಸುಳ್ಯದ ಇನ್‌ಸ್ಪೆಕ್ಟರ್ ತಿಮ್ಮಪ್ಪ ನಾಯ್ಕ್, ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!