ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಕೆ.ಎಸ್.ಆರ್.ಟಿ.ಸಿ ಬಸ್ ಟೋಲ್ ಗೇಟ್‌ನ ಸೂಚನಾ ಫಲಕಕ್ಕೆ ಢಿಕ್ಕಿ..!

ಕೆ.ಎಸ್.ಆರ್.ಟಿ. ಬಸ್ ರಸ್ತೆ ಪಕ್ಕದ ಟೋಲ್ ಗೇಟ್ ನ ಸೂಚನಾ ಫಲಕಕ್ಕೆ ಢಿಕ್ಕಿ ಹೊಡೆದ ಪರಿಣಾಮ 12 ಮಂದಿ ಗಾಯಗೊಂಡ ಘಟನೆ ಸಾಸ್ತಾನ ಟೋಲ್ ಸಮೀಪ ನಡೆದಿದೆ.

ಬಸ್ ಚಾಲಕನ ನಿಯಂತ್ರಣ ತಪ್ಪಿ ಟೋಲ್ ನಿಂದ 500 ಮೀಟರ್ ಹಿಂದಿದ್ದ ಸೂಚನಾ ಫಲಕಕ್ಕೆ ಢಿಕ್ಕಿಯಾಗಿದೆ. ಇಳಕಲ್ ನಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ 36 ಮಂದಿ ಪ್ರಯಾಣಿಕರಿದ್ದು, ಅಪಘಾತದ ರಭಸಕ್ಕೆ 12 ಮಂದಿ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಓರ್ವ ಮಹಿಳೆಗೆ ಗಂಭೀರ ಗಾಯವಾಗಿದೆ. ಉಳಿದ ಪ್ರಯಾಣಿಕರು ಹಾಗೂ ಬಸ್ಸಿನ ಚಾಲಕ ಮತ್ತು ನಿರ್ವಾಹಕ ಪ್ರಾಣಪಾಯದಿಂದ ಪಾರಾಗಿದ್ದಾರೆ.

ಗಾಯಗೊಂಡವರನ್ನು ತತ್ ಕ್ಷಣ ಕೋಟ ಜೀವನ್ ಮಿತ್ರ ಹಾಗೂ ಟೋಲ್ ಆಂಬುಲೆನ್ಸ್ ನಲ್ಲಿ ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಈ ಬಗ್ಗೆ ಕೋಟ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!